ಬೆಂಗಳೂರು ಗ್ರಾಮಾಂತರ : ಬೆಂಗಳೂರಿನ ಹಲವೆಡೆ ಏಕಾಏಕಿ ಮಳೆಯಾಗಿದ್ದು, ಸುರಿದ ಭಾರೀ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದೆ. ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿಯಲ್ಲಿ ಮಳೆಯಿಂದಾಗಿ, ಚರಂಡಿ ತುಂಬಿ ಮನೆಗಳಿಗೆ ನೀರು ನುಗ್ಗಿದೆ.
ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ಗ್ರಾಮದ ಆಂಜಿನಮ್ಮ ಮತ್ತು ವಿಜಿಯಮ್ಮ, ನಂಜಮ್ಮ ಸೇರಿದಂತೆ ಹಲವು ಮನೆಗಳಿಗೆ ನೀರು ನುಗ್ಗಿದೆ. ಚರಂಡಿ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿದರೂ, ಹಾಡೋನಹಳ್ಳಿ ಪಂಚಾಯತಿ ಅಧಿಕಾರಿಗಳು ಗ್ರಾಮಸ್ಥರ ಮನವಿಗೆ ಸ್ಪಂದಿಸಲಿಲ್ಲ. ಇದರಿಂದಾಗಿ ಇದೀಗ ಮನೆಗೆ ನೀರು ನುಗ್ಗಿದ್ದು, ಮನೆ ಮಾಲೀಕರು ಪರದಾಡುವಂತಾಗಿದೆ.