ಮಂಗಳೂರು: ಸುಹಾಸ್ ಶೆಟ್ಟಿ ಪ್ರಕರಣದಲ್ಲಿ ಪೊಲೀಸರು 8 ಆರೋಪಿಗಳ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯದ ಮೊಬೈಲ್ ವಿಡಿಯೋ, CCTV ಫೂಟೇಜ್‌ಗಳನ್ನು ಸಂಗ್ರಹಿಸಿದ್ದು, ಪೊಲೀಸರು ಈವರೆಗೆ 50ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದ್ದಾರೆ. ಸುಹಾಸ್ ಶೆಟ್ಟಿ ಬಜಪೆಗೆ ಬರ್ತಾನೆ ಅನ್ನೋ ಮಾಹಿತಿ ಸಿಕ್ಕಿದ್ಹೇಗೆ? ಹಂತಕರಿಗೆ ಈ ಬಗ್ಗೆ ಬಜಪೆ ಸ್ಥಳೀಯರು ನೆರವು ನೀಡಿದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
ಇರ ಬೆನ್ನಲ್ಲೇ ಮತ್ತೊಂದು ಮಾಹಿತಿ ಹೊರಬಂದಿದೆ. ಚಿಕ್ಕಮಗಳೂರಿನ ಕಳಸದ ರೆಸಾರ್ಟ್ ಒಂದರಲ್ಲಿ ಏ.2 ರಂದು ಆರೋಪಿಗಳು ನೈಟ್ ಪಾರ್ಟಿ ಮಾಡಿದ್ದಾರೆ. ಹತ್ಯೆಗೆ ಸ್ಕೆಚ್ ರೂಪಿಸಲೆಂದೇ ಪಾರ್ಟಿ ಮಾಡಿರುವ ಅನುಮಾನ ವ್ಯಕ್ತವಾಗಿದೆ.
Red Blood Cells: ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸಿ!
ಕ್ಯಾಂಪ್ ಫೈರ್ ಹಾಕಿ ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿಗಳಾದ ಮುಝಮ್ಮಿಲ್, ನಿಯಾಜ್ ಹಾಗೂ ಚಿಕ್ಕಮಗಳೂರು ಮೂಲದ ರಂಜಿತ್ ಪಾರ್ಟಿ ಮಾಡಿದ್ದಾರೆ. ಈ ಮೂವರ ಜೊತೆ ಇನ್ನೂ ಐದು ಜನ ಅಪರಿಚಿತರು ಪಾರ್ಟಿಯಲ್ಲಿ ಭಾಗಿಯಾಗಿದ್ದರು.
ಈ ಪಾರ್ಟಿಯಲ್ಲಿ ರಂಜಿತ್‌ನನ್ನು ಮುಝಮ್ಮಿಲ್‌ಗೆ ನಿಯಾಜ್ ಪರಿಚಯ ಮಾಡಿಕೊಟ್ಟಿದ್ದ. ಈ ಪಾರ್ಟಿಯಲ್ಲೇ ಸುಹಾಸ್ ಹತ್ಯೆ ಬಗ್ಗೆ ಮಾತುಕತೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಸುಹಾಸ್ ಶೆಟ್ಟಿ ಹತ್ಯೆಗೆ ಫಾಝಿಲ್ ಸಹೋದರ ಆದಿಲ್ (Adil) 5 ಲಕ್ಷ ರೂ. ಸುಪಾರಿ ನೀಡಿದ್ದ. ಈ ಹಣದ ಪೈಕಿ 3 ಲಕ್ಷ ರೂ.ಹಣವನ್ನು ಮುಂಗಡವಾಗಿ ಪಾವತಿಸಲಾಗಿತ್ತು. ಈ ಹಣದಲ್ಲೇ ಪಾರ್ಟಿ ಮಾಡಿರುವ ಅನುಮಾನ ವ್ಯಕ್ತವಾಗಿದೆ.
ಮಂಗಳೂರಿನ ಮೊಹಮ್ಮದ್ ಮುಝಮ್ಮಿಲ್ 4 ತಿಂಗಳ ಹಿಂದೆ ಸೌದಿ ಅರೇಬಿಯಾದಿಂದ ಬಂದಿದ್ದು ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಮೇಸ್ತ್ರಿ ಕೆಲಸ ಮಾಡುತ್ತಿರುವ ನಿಯಾಜ್ ಬಜ್ಪೆ ಶಾಂತಿಗುಡ್ಡೆ ಮಸೀದಿ ಬಳಿ ನೆಲೆಸಿದ್ದ. ಕಳಸ ತಾಲೂಕಿನ ರುದ್ರ ಪಾದದ ರಂಜಿತ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಸುಹಾಸ್ ಮೇಲೆ ದಾಳಿ ಮಾಡಲು ಈತನೇ ಲಾಂಗ್ ತಂದುಕೊಟ್ಟ ಆರೋಪವಿದೆ.