ಬೆಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎಗೆ ಕೊಟ್ಟಿಲ್ಲ, ಅದರ ಅಗತ್ಯ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎಗೆ ವಹಿಸಲು ಬಿಜೆಪಿ ನಾಯಕರು ಹೇಳುತ್ತಿರುವುದು ಅವರ ಅಭಿಪ್ರಾಯ.
ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಎಂಟು ಜನರನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ ಈ ಪ್ರಕರಣ ಎನ್ಐಎಗೆ ಕೊಟ್ಟಿಲ್ಲ ಅದರ ಅಗತ್ಯ ಇಲ್ಲ ಎಂದರು.
ಮಗು ಆದ್ಮೇಲೆ Hair Fall ಜಾಸ್ತಿ ಆಗಿದ್ಯಾ!? ಹಾಗಿದ್ರೆ ತಪ್ಪದೇ ಆಹಾರದಲ್ಲಿ ಈ ವಸ್ತು ಸೇರಿಸಿ!
ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರ ಬಗ್ಗೆ ಮಾತಾಡಿದ ಪರಮೇಶ್ವರ್, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೆ ಐದು ಕೇಸ್ಗಳು ಅವರ ಮೇಲಿವೆ. ಹಾಗಾಗಿ ನಾವು ಹಾಗೂ ಭೇಟಿ ಕೊಟ್ಟಿಲ್ಲ. ಆದರೆ ಸುಹಾಸ್ ಶೆಟ್ಟಿ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಪರಮೇಶ್ವರ್ ಭರವಸೆ ನೀಡಿದರು.