ಬೆಂಗಳೂರು: ರಾಜಧಾನಿ ಬೆಂಗಳೂರಿನ ಚೆನ್ನಮಕೆರೆ ಆಟದ ಮೈದಾನದಲ್ಲಿ ಬಸವನಗುಡಿ ಕ್ರಿಕೆಟ್ ಅಕಾಡೆಮಿಯ ವತಿಯಿಂದ ಬೇಸಿಗೆ ಶಿಬಿರದ ಕ್ರಿಕೆಟ್ ತರಬೇತಿ ಆಯೋಜನೆ ಮಾಡಲಾಗಿತ್ತು. ಪ್ರತಿಭಾವಂತ ಕ್ರಿಕೆಟ್ ಆಟಗಾರರನ್ನು ಗುರುತಿಸಿ ಪ್ರೋತ್ಸಾಹಿಸಲು ಈ ಶಿಬಿರ ಆಯೋಜನೆ ಮಾಡಿದ್ದು, ಟಿಎ ಶರವಣ ಅವರು ಪ್ರತಿಭಾವಂತ ಕ್ರೀಡಾಪಟುಗಳಿಗೆ ಬಹುಮಾನವನ್ನು ವಿತರಿಸಿದರು.
ಈ ವೇಳೆ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ರೀಡೆಗಳು ನಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರನ್ನಾಗಿಸುತ್ತವೆ. ಎಲ್ಲರೂ ಕ್ರೀಡಾ ಮನೋಭಾವದಿಂದ ಆಟವಾಡಿದಾಗ ಮಾತ್ರ ಇಂತಹ ಕ್ರೀಡಾಕೂಟಗಳು ಯಶಸ್ವಿಯಾಗುತ್ತವೆ. ಪ್ರತಿ ಕ್ರೀಡಾಕೂಟದಲ್ಲೂ ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳಿ ಮತ್ತು ಸೋಲು ಗೆಲುವುಗಳನ್ನು ಸಮಾನ ರೀತಿಯಲ್ಲಿ ಸ್ವೀಕರಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಸವನಗುಡಿ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾದ ರವಿಕುಮಾರ್ ಭಾಗಿಯಾಗಿದ್ದರು.