ನವದೆಹಲಿ:- ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಮತ್ತೆ ಸಂಕಷ್ಟ ಎದುರಾಗಿದೆ. ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಆಚೆ ಬಂದಿರುವ ವಿನಯ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!
ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಇದನ್ನು ಪುರಸ್ಕರಿಸಿದ ಸುಪ್ರೀಂ, ಜಾಮೀನು ರದ್ದುಗೊಳಿಸಿದ್ದು, ಇನ್ನೊಂದು ವಾರದಲ್ಲಿ ಸಿಬಿಐ ಮುಂದೆ ಶರಣಾಗುವಂತೆ ವಿನಯ್ ಕುಲಕರ್ಣಿಗೆ ಸೂಚನೆ ನೀಡಿದೆ. ಶಾಸಕ ಈಗಾಗಲೇ ಜಾಮೀನಿನ ಮೇಲೆ ಹೊರಗಿದ್ದಾರೆ. ಈಗ ಮತ್ತೆ ಜೈಲು ಸೇರುವ ಭೀತಿ ಎದುರಾಗಿದೆ.
ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ ಕುಲಕರ್ಣಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬಳಿಕ 2021ರ ಆಗಸ್ಟ್ 11ರಂದು ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿಗೆ ಜಾಮೀನು ನೀಡಿತ್ತು. ಆದ್ರೆ, ಈ ಜಾಮೀನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಸಾಕ್ಷಿಗಳಿಗೆ 1 ಲಕ್ಷ ಹಣದ ಆಮಿಷ ಒಡ್ಡಿರುವುದರಿಂದ ಜಾಮೀನು ರದ್ದಿಗೆ ಮನವಿ ಮಾಡಿತ್ತು. ಇದೀಗ ಸಿಬಿಐ ಅರ್ಜಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್, ವಿನಯ್ ಕುಲಕರ್ಣಿಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.