ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂಕೋರ್ಟ್ ತೀವ್ರ ತರಾಟೆ

ನವದೆಹಲಿ: ತಮಿಳುನಾಡು ರಾಜ್ಯಪಾಲ ಆರ್‌.ಎನ್.ರವಿ ಅವರನ್ನು ಸುಪ್ರೀಂಕೋರ್ಟ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ರಾಷ್ಟ್ರಪತಿಗಳ ಪರಿಗಣನೆಗೆ 10 ಮಸೂದೆಗಳನ್ನು ಕಾಯ್ದಿರಿಸುವುದು ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರನ್ನು ಒಳಗೊಂಡ ಪೀಠವು, ಸಂವಿಧಾನದ 200ನೇ ವಿಧಿಯಡಿಯಲ್ಲಿ ರಾಜ್ಯಪಾಲರು ಯಾವುದೇ ಅವಕಾಶವನ್ನು ಹೊಂದಿಲ್ಲ, ಜೊತೆಗೆ ಮಂತ್ರಿ ಮಂಡಲದ ನೆರವು ಮತ್ತು ಸಲಹೆಯ ಮೇರೆಗೆ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಹೇಳಿದೆ. ಇದೇ ವೇಳೆ ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿಯಲು ಮತ್ತು ಸಂಪೂರ್ಣ … Continue reading ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂಕೋರ್ಟ್ ತೀವ್ರ ತರಾಟೆ