Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿರಾಟ್‌ ಕೊಹ್ಲಿಯ 13 ವರ್ಷಗಳ ಹಳೆಯ ದಾಖಲೆ ಮುರಿದ ಸೂರ್ಯಕುಮಾರ್‌!

    By AIN AuthorDecember 14, 2023
    Share
    Facebook Twitter LinkedIn Pinterest Email
    Demo

    ಗ್ಕೆಬರ್ಹಾ: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ವಿಶ್ವದ ನಂ.1 ಟಿ20 ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌‌ (Suryakumar Yadav), ವಿರಾಟ್‌ ಕೊಹ್ಲಿ (Virat Kohl) ಅವರ ಹೆಸರಲ್ಲಿದ್ದ 13 ವರ್ಷಗಳ ಹಳೆಯ ದಾಖಲೆಯೊಂದನ್ನ ಸರಿಗಟ್ಟಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧ ಗ್ಕೆಬರ್ಹಾ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಸೂರ್ಯಕುಮಾರ್‌ 36 ಎಸೆತಗಳಲ್ಲಿ 56 ರನ್‌ (3 ಸಿಕ್ಸರ್‌, 5 ಬೌಂಡರಿ) ಗಳಿಸುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 2 ಸಾವಿರ ರನ್‌ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ವೇಗದ 2000 ರನ್‌ ಪೂರೈಸಿದ ಬ್ಯಾಟರ್‌ ಎನಿಸಿಕೊಂಡರು.

    2010ರಲ್ಲಿ ಇಂಗ್ಲೆಂಡ್‌ ವಿರುದ್ಧ ಮ್ಯಾಂಚೆಸ್ಟರ್‌ನಲ್ಲಿ‌ 56ನೇ ಇನಿಂಗ್ಸ್ ನಲ್ಲಿ 2000 ಸಾವಿರ ರನ್‌ ಪೂರೈಸಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್‌ ಯಾದವ್‌ ಸಹ ತಮ್ಮ 56ನೇ ಇನ್ನಿಂಗ್ಸ್‌ನಲ್ಲಿ 2,000 ರನ್‌ ಪೂರೈಸಿದ್ದಾರೆ. 2000 ರನ್‌ ಪೂರೈಸಲು 1,164 ಎಸೆತಗಳನ್ನು ಎದುರಿಸಿದ್ದಾರೆ. ಅಲ್ಲದೇ ಸೂರ್ಯಕುಮಾರ್‌ ಯಾದವ್‌ ದಕ್ಷಿಣ ಆಫ್ರಿಕಾ ವಿರುದ್ಧ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅರ್ಧಶತಕ ಸಿಡಿಸಿದ ಮೊದಲ ಕ್ಯಾಪ್ಟನ್‌ ಎಂಬ ಖ್ಯಾತಿಯನ್ನೂ ಗಳಿಸಿದ್ದಾರೆ.

    ಸೂರ್ಯಕುಮಾರ್‌ ಯಾದವ್‌ 2022ರ ಅಕ್ಟೋಬರ್‌ನಲ್ಲಿ ಟಿ20 ಕ್ರಿಕೆಟ್‌ನಲ್ಲಿ ವಿಶ್ವದ ನಂ.1 ಬ್ಯಾಟ್ಸ್‌ಮ್ಯಾನ್‌ ಪಟ್ಟಕ್ಕೇರಿದರು. 31 ಪಂದ್ಯಗಳಲ್ಲಿ 1,164 ರನ್‌ಗಳನ್ನು ಪೂರೈಸಿ ವಿಶ್ವದ ನಂ.1 ಪಟ್ಟಕ್ಕೇರಿದರು. 2023ರ ವರ್ಷದಲ್ಲಿಯೂ ನಂ.1 ಪಟ್ಟದಲ್ಲಿ ಮುಂದುವರಿದಿದ್ದಾರೆ. ಈಗಾಗಲೇ 17 ಪಂದ್ಯಗಳಿಂದ 45.53 ಸರಾಸರಿಯಲ್ಲಿ, 153 ಸ್ಟ್ರೈಕ್‌ರೇಟ್‌ನಲ್ಲಿ 592 ರನ್‌ ಗಳಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 4 ಅರ್ಧಶತಕಗಳು ಸೇರಿವೆ.

    Demo
    Share. Facebook Twitter LinkedIn Email WhatsApp

    Related Posts

    ಆತನಿಗೆ ಹಲವರೊಂದಿಗೆ ಅಫೇರ್ ಇತ್ತು; ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ!

    June 30, 2025

    ನವೆಂಬರ್ 19 ರಂದು ನಾವು ಕಣ್ಣೀರು ಹಾಕಿದ್ದೇವೆ, ಜೂನ್ 24 ರಂದು ಬಡ್ಡಿಯೊಂದಿಗೆ ಪಾವತಿಸಿದ್ದೇವೆ: ರೋಹಿತ್ ಶರ್ಮಾ

    June 30, 2025

    Virat Kohli: ಅಬ್ಬಬ್ಬಾ… ಒಂದು ಇನ್ಸ್ಟಾಗ್ರಾಮ್ ಪೋಸ್ಟ್’ಗೆ ಕಿಂಗ್ ಕೊಹ್ಲಿ ಗಳಿಸುವ ಆದಾಯ ಇಷ್ಟೊಂದಾ..!

    June 30, 2025

    World Championship of Legends: ಜುಲೈ 20 ರಂದು ಭಾರತ-ಪಾಕ್‌ ಹೈವೋಲ್ಟೇಜ್ ಮ್ಯಾಚ್!

    June 29, 2025

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025

    Praggnanandhaa: ವಿಶ್ವದ ನಂ. 4 ಸ್ಥಾನ ಅಲಂಕರಿಸಿದ ಭಾರತದ ಚದುರಂಗ ಚತುರ ಆರ್ ಪ್ರಜ್ಞಾನಂದ!

    June 28, 2025

    IND vs ENG: ಇಂದಿನಿಂದ ಭಾರತ- ಇಂಗ್ಲೆಂಡ್ ನಡುವೆ ಟಿ20 ಸರಣಿ ಆರಂಭ..!

    June 28, 2025

    Australia vs West Indies: ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ..!

    June 28, 2025

    ಸೂರ್ಯಕುಮಾರ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಭಾರತ-ಬಾಂಗ್ಲಾದೇಶ ಟಿ20 ಸರಣಿ ಆಡುವುದು ಅನುಮಾನ!

    June 27, 2025

    Shikhar Dhawan: ಹೋಟೆಲ್ ರೂಂಗೆ ಗರ್ಲ್’ಫ್ರೆಂಡ್ ಕರೆದೊಯ್ದಿದ್ದ ಶಿಖರ್ ಧವನ್! ಮುಂದೇನಾಯ್ತು..?

    June 27, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025

    IND vs ENG: ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾ: ಬುಮ್ರಾ ಬಗ್ಗೆ ಗೌತಮ್ ಗಂಭೀರ್ ಹೇಳಿದ್ದೇನು..?

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.