ಇಂಡಿಯನ್ ಪ್ರೀಮಿಯರ್ ಲೀಗ್ನ 46ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 162 ರನ್ ಕಲೆಹಾಕಿತು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.3 ಓವರ್ಗಳಲ್ಲಿ ಚೇಸ್ ಮಾಡಿ 6 ವಿಕೆಟ್ಗಳ ಗೆಲುವು ದಾಖಲಿಸಿದೆ.
ಇದರ ನಡುವೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಮೈದಾನದಲ್ಲಿ ಆಡಿದ ಜಗಳದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ಪರ ವಿಕೆಟ್ ಕೀಪಿಂಗ್ ಮಾಡುವಾಗ ಕೆಎಲ್ ರಾಹುಲ್ ಅವರು ವಿರಾಟ್ ಕೊಹ್ಲಿ ಜೊತೆ ವಾಗ್ವಾದ ನಡೆಸುತ್ತಿದ್ದರು. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡುತ್ತಿದೆ.
ಮಾವಿನಹಣ್ಣನ್ನು ರಾತ್ರಿ ವೇಳೆ ತಿಂತೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರನ್ನು ಉತ್ತಮ ಸ್ನೇಹಿತರು ಎಂದು ಪರಿಗಣಿಸಲಾಗುತ್ತದೆ, ಆದರೆ ಐಪಿಎಲ್ ಪಂದ್ಯದ ಸಮಯದಲ್ಲಿ ವಿರಾಟ್ ಕೊಹ್ಲಿ ಬಹುಶಃ ಕೆಎಲ್ ಮೇಲೆ ಯಾವುದೋ ವಿಷಯಕ್ಕೆ ಕೋಪಗೊಂಡಿದ್ದಾರೆ. ಕುಲದೀಪ್ ಯಾದವ್ ಬೌಲಿಂಗ್ ಮಾಡುತ್ತಿದ್ದಾಗ ಇನ್ನಿಂಗ್ಸ್‌ನ 8 ನೇ ಓವರ್‌ನಲ್ಲಿ ಈ ಘಟನೆ ಸಂಭವಿಸಿದೆ. ಮೈದಾನದಲ್ಲಿ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ನಡುವಿನ ವಾದ ಸ್ವಲ್ಪ ಸಮಯದ ನಂತರ ಸರಿಯಾಯಿತು.
ಆದರೆ ಪಂದ್ಯದ ನಂತರ ಈ ಜಗಳ ಮತ್ತೆ ಮುಂದೆವರೆದಿದೆ. ಇಬ್ಬರೂ ಗಂಭೀರವಾಗಿ ಮಾತನಾಡುತ್ತಿರುವುದು ವಿಡಿಯದಲ್ಲಿ ಸೆರೆಯಾಗಿದೆ. ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಮಾತನಾಡುತ್ತಿರುವಾಗ, ದೇವದತ್ ಪಡಿಕ್ಕಲ್ ಮತ್ತು ಕರುಣ್ ನಾಯರ್ ಕೂಡ ಒಟ್ಟಿಗೆ ನಿಂತಿದ್ದರು. ಆರನೇ ಓವರ್‌ನಲ್ಲಿ ಡೆಲ್ಲಿ ಫೀಲ್ಡರ್ಗಳು ದಿಢೀರ್ ತಮ್ಮ ಸ್ಥಾನವನ್ನು ಬದಲಾಯಿಸಿದ್ದಕ್ಕೆ ಕೊಹ್ಲಿ ಇಲ್ಲಿ ರಾಹುಲ್ ಜೊತೆ ವಾಗ್ವಾದಕ್ಕೆ ಇಳಿದಿದ್ದರು ಎಂದು ಹೇಳಲಾಗಿದೆ.