ನವದೆಹಲಿ: ಕಸದ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಮಾಡುವುದನ್ನು ಗುರಿಯಾಗಿಸಿಕೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರ್ಕಾರ ದರ ಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ. ನೀರು, ಮೆಟ್ರೋ ರೈಲು,
ಒಂದು ಮುತ್ತಿಗೆ 50 ಸಾವಿರ: ಹಣ ವಾಪಸ್ ಕೇಳಿದ್ದಕ್ಕೆ ಹನಿಟ್ರ್ಯಾಪ್ ಬೆದರಿಕೆ, ಶಿಕ್ಷಕಿ ಸೇರಿ ಮೂವರು ಅರೆಸ್ಟ್!
ಕೆಎಸ್ಆರ್ಟಿಸಿ ಬಸ್ ಟಿಕೆಟ್, ಹಾಲು(3 ಸಲ ದರ ಏರಿಕೆ), ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ. ಇದು ದರ ಬೀಜಾಸುರ ಕಾಂಗ್ರೆಸ್ ಸರ್ಕಾರ ಎಂದು ದೂರಿದ್ದಾರೆ.
ಇಷ್ಟು ಸಾಲದೆಂಬಂತೆ ಜನರ ಮೇಲೆ ಏ. 1ರಿಂದ ಕಸದ ಸೆಸ್ ಹೇರುತ್ತಿದೆ ದರ ಬೀಜಾಸುರ ಸರ್ಕಾರ. ಕಸದ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಮಾಡುವುದನ್ನು ಗುರಿಯಾಗಿಸಿಕೊಂಡಿದೆ ಎಂದು ಕಿಡಿಕಾರಿದ್ದಾರೆ.