ಬೆಂಗಳೂರು:- ಮಕ್ಕಳಿಗೆ ಅನಾರೋಗ್ಯ ಇದ್ದರೇ ಶಿಕ್ಷಕರು ರಜೆ ಕೊಡಬೇಕು ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಗರ್ಭಿಣಿಯರು ಮಾಸ್ಕ್ ಧರಿಸಬೇಕು. ವಯಸ್ಸಾದವರು ಜನಸಂದಣಿ ಇರುವ ಸ್ಥಳಗಳಿಗೆ ತೆರಳಬಾರದು. ರೋಗಲಕ್ಷಣ ಕಂಡುಬಂದರೆ ಕೂಡಲೇ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಕೋವಿಡ್ ಪ್ರಕರಣಗಳು ಹೆಚ್ಚಾದರೆ ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ಯಾವುದೇ ಸೀರಿಯಸ್ ಇಲ್ಲ ಎಂದು ಸಚಿವ ಶರಣಪ್ರಕಾಶ್ ಹೇಳಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವುದೇ ಸೂಚನೆ ಕೊಟ್ಟಿಲ್ಲ. ಹಿರಿಯರು, ಗರ್ಭಿಣಿಯರು, ಮಕ್ಕಳು ಮಾಸ್ಕ್ ಹಾಕಿಕೊಳ್ಳಿ. ಮಕ್ಕಳಿಗೆ ಅನಾರೋಗ್ಯ ಇದ್ದರೇ ಶಿಕ್ಷಕರು ರಜೆ ಕೊಡಬೇಕು. ಟೆಸ್ಟಿಂಗ್ ನಡೆಯುತ್ತಿದೆ. ಪರೀಕ್ಷಾ ಕಿಟ್ಗಳನ್ನು ಕೂಡ ಆರ್ಡರ್ ಮಾಡಲಾಗಿದೆ. ವಿದೇಶದಿಂದ ಬರುವವರು ಸಹ ಕೊವಿಡ್ ಟೆಸ್ಟ್ ಮಾಡಿಕೊಳ್ಳಬೇಕು ಎಂದರು.