ಬೆಂಗಳೂರು: ಪಾಕಿಸ್ತಾನದ ವಿಫಲ ದಾಳಿಗಳಿಗೆ ಭಾರತ ಸೂಕ್ತ ಪ್ರತ್ಯುತ್ತರ ನೀಡುತ್ತಿದ್ದು, ಭಾರತೀಯ ವಾಯು ರಕ್ಷಣಾ ವ್ಯವಸ್ಥೆಯು ಪಾಕಿಸ್ತಾನದ ಕ್ಷಿಪಣಿಗಳು ಮತ್ತು ಡ್ರೋನ್ಗಳನ್ನು ಆಕಾಶದಲ್ಲೇ ನಾಶಪಡಿಸಿದೆ. ಪರಿಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ
ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮತ್ತು ಪ್ರಯಾಣಿಕರಿಗೆ ಮೂರು ಗಂಟೆ ಮುಂಚಿತವಾಗಿ ಆಗಮಿಸುವಂತೆ ಸೂಚಿಸಲಾಗಿದೆ. ಪಾಕಿಸ್ತಾನದ ಗಡಿಯೊಳಗಿನ ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ನೀವು Non Veg ತಿನ್ನೊಲ್ವಾ ಹಾಗಿದ್ರೆ ವರ್ಷಕ್ಕೊಮ್ಮೆ ಈ ಹಣ್ಣು ತಿನ್ನಿ ಸಾಕು ನಿಮಗೆ ಕ್ಯಾನ್ಸರ್ ಬರೊಲ್ಲ!
ಈ ಬಗ್ಗೆ ಟ್ವೀಟ್ ಮಾಡಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ, ದೇಶಾದ್ಯಂತ ಘೋಷಿಸಲಾಗಿರುವ ಭದ್ರತಾ ಎಚ್ಚರಿಕೆಯ ಹಿನ್ನೆಲೆಯಲ್ಲಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತಾ ತಪಾಣೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದೆ.
ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೂಲಕ, ಚೆಕ್-ಇನ್, ಭದ್ರತಾ ತಪಾಸಣೆ ಮತ್ತು ಬೋರ್ಡಿಂಗ್ ಪ್ರಕ್ರಿಯೆಯನ್ನು ಸುಗಮವಾಗಿ ಕೈಗೊಳ್ಳಬಹುದು ಎಂದು ಹೇಳಿದೆ.
ಮುಂದುವರೆದು, ಪ್ರಯಾಣಿಕರು ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ ವಿಮಾನಯಾನ ಸಂಸ್ಥೆಗಳ ಜೊತೆಗೆ ಸಂಪರ್ಕಿಸಬೇಕೆಂದು ವಿನಂತಿಸಲಾಗಿದ್ದು, ಸಹಕರಿಸುವಂತೆ ಮನವಿ ಮಾಡಿದೆ.