ಬೆಂಗಳೂರು: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಿದೆ. ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತಿದೆ. ಪಾಕಿಸ್ತಾನವೂ ಕೂಡ ಪ್ರತಿ ದಾಳಿ ನಡೆಸಿದ್ದರೂ ಎಲ್ಲವೂ ವಿಫಲಗೊಂಡಿದೆ. ಸಧ್ಯಕ್ಕೆ ಪಾಕಿಸ್ತಾನ ಹಾಗೂ ಭಾರತದ ನಡುವೆ ಯುದ್ಧ ಸ್ಥಿತಿ ನಿರ್ಮಾಣವಾಗಿದೆ.
ಕರ್ನಾಟಕದಲ್ಲಿ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮತ್ತು ಗೃಹ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಭಯೋತ್ಪಾದಕರ ಸ್ಲೀಪರ್ ಸೆಲ್ ಗಳ ಮೇಲೆ ನಿಗಾ ಇಡಲು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ನೀವು Non Veg ತಿನ್ನೊಲ್ವಾ ಹಾಗಿದ್ರೆ ವರ್ಷಕ್ಕೊಮ್ಮೆ ಈ ಹಣ್ಣು ತಿನ್ನಿ ಸಾಕು ನಿಮಗೆ ಕ್ಯಾನ್ಸರ್ ಬರೊಲ್ಲ!
ಗಡಿಯಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಭಯೋತ್ಪಾದಕರ ಸ್ಪೀಪರ್ ಸೆಲ್ ಗಳು ಸಕ್ರಿಯವಾಗುವ ಆತಂಕ ಇದೆ. ಸೂಕ್ಷ್ಮ ಪರಿಸ್ಥಿತಿಯನ್ನು ಉಪಯೋಗಿಸಿಕೊಂಡು ಭಯೋತ್ಪಾದಕ ಕೃತ್ಯ ಎಸಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಇಂತಹ ಸ್ಲೀಪರ್ ಸೆಲ್ ಗಳ ಮೇಲೆ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ.