ಮಂಡ್ಯ : ಮೈಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೆಜ್ಜಲಗೆರೆ ಬಳಿ ಕಾರು ಮುಂದೆ ಹೋಗುತ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಿ, ಸಾಫ್ಟವೇರ್ ಎಂಜಿನಿಯರ್ ಅಶ್ವಿನಿ (33) ಮೃತಪಟ್ಟವರು.
ಅಶ್ವಿನಿ ಅವರ ಪತಿ ಸಾಫ್ಟ್ವೇರ್ ಎಂಜಿನಿಯರ್ ಶ್ರೀಕಾಂತ್ ಭಟ್ (37) ಮತ್ತು 2 ವರ್ಷದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರವಾಸ ಮುಗಿಸಿಕೊಂಡು ಮೈಸೂರಿನಿಂದ ಬೆಂಗಳೂರು ಕಡೆ ಹೋಗುತ್ತಿದ್ದಾಗ ಭಾನುವಾರ ಮಧ್ಯಾಹ್ನ 3 ಗಂಟೆಯಲ್ಲಿ ಈ ಅಪಘಾತ ಸಂಭವಿಸಿದೆ.
ಲಿವಿಂಗ್ ಟುಗೆದರ್ಗೆ ಒಪ್ಪದ ಪೋಷಕರು ; ರೈಲು ಹಳಿಗೆ ಹಾರಿ ಯುವಕ ಆತ್ಮಹತ್ಯೆ
ಶ್ರೀಕಾಂತ್ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದವರು. ಕೆಲಸದ ನಿಮಿತ್ತ ಪ್ರಸ್ತುತ ಬೆಂಗಳೂರು ನಗರದಲ್ಲಿ ವಾಸವಾಗಿದ್ದಾರೆ. ಈ ಸಂಬಂಧ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.