ಬೆಂಗಳೂರು ಗ್ರಾಮಾಂತರ : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರ ದುರ್ಮರಣಕ್ಕೀಡಾಗಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ.
ಕಾರಿನಲ್ಲಿದ್ದವರು ತುಮಕೂರಿನ ಸಂಬಂಧಿಗಳ ಮನೆಯಲ್ಲಿನ ನಾಮಕರಣ ಕಾರ್ಯಕ್ರಮಕ್ಕೆ ತೆರಳುತಿದ್ದರು ಎನ್ನಲಾಗಿದೆ. ಬೆಂಗಳೂರಿನಿಂದ ತುಮಕೂರು ಕಡೆಗೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಕಾರು ಚಾಲಕ ಗೋಪಾಲ್(45), ಗೋಪಾಲ್ (60), ಶಶಿಕಲಾ (55) ಮತ್ತು ದೀಪಿಕಾ (35) ಎಂದು ಗುರುತಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಅಪಘಾತದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.