ದೊಡ್ಡಬಳ್ಳಾಪುರ: ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ಗೌರಿಬಿದನೂರು ರಾಜ್ಯ ಹೆದ್ದಾರಿಯ ಮಾಕಳಿ ಬಳಿ ನಡೆದಿದೆ. ದೊಡ್ಡಬಳ್ಳಾಪುರದ ಕರೆನಹಳ್ಳಿ ನಿವಾಸಿಳಾದ ಕಾಳಪ್ಪ, ಪುರುಷೋತ್ತಮ್, ನಾರಾಯಣಪ್ಪ, ಡಿಎಂ ಈಶ್ವರಪ್ಪ ಮೃತ ದುರ್ದೈವಿಗಳಾಗಿದ್ದು,
ಬೆಳಗ್ಗೆ ದೇವಸ್ಥಾನಕ್ಕೆಂದು ಇನ್ನೋವಾ ಕಾರಿನಲ್ಲಿ 8 ಮಂದಿ ತೆರಳುತ್ತಿದ್ದರು. ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದ್ದು, ನಾಲ್ವರು ಮೃತಪಟ್ಟು, ಇನ್ನೂ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಹಕರಿಗೆ ಎಚ್ಚರಿಕೆ.. ನೀವು ಈ ವಿಷಯಗಳನ್ನು ತಿಳಿದುಕೊಳ್ಳಲೇಬೇಕು..! ಇಂದಿನಿಂದ ಹೊಸ ನಿಯಮಗಳು ಜಾರಿಗೆ!
ಅಪಘಾತದ ರಬಸಕ್ಕೆ ಹೆದ್ದಾರಿಯಲ್ಲಿ ಮೃತದೇಹಗಳು ಚೆಲ್ಲಾ ಪಿಲ್ಲಿಯಾಗಿ ಬಿದ್ದಿದ್ದವು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.