ದೇವನಹಳ್ಳಿ: ಬೆಂಗಳೂರಿನ ದೇವನಹಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬಳಿ ಭಾನುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಈ ಹಣ್ಣಿಗೆ ಹೃದಯಾಘಾತ ತಡೆಯೋ ಶಕ್ತಿ ಇದೆ.. ವಾರದಲ್ಲಿ ಒಮ್ಮೆಯಾದರೂ ತಪ್ಪದೇ ಸೇವಿಸಿ!
ಡಾಬಾ ಗೇಟ್ ಬಳಿಯ ಈ ದುರ್ಘಟನೆಯಾಗಿದ್ದು, ಜಾರ್ಖಂಡ್ ಮೂಲದ ವ್ಯಕ್ತಿ ಚಾಲನೆ ಮಾಡುತ್ತಿದ್ದ ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಭಾರೀ ವೇಗವಾಗಿ ಬಂದ ಲಾರಿಯ ಚಕ್ರಕ್ಕೆ ಸಿಲುಕಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನೊಬ್ಬನಿಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ದೇವನಹಳ್ಳಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.