ಬೆಂಗಳೂರು/ ಶ್ರೀನಗರ:- ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದೆ.
ಕಾಶ್ಮೀರದಲ್ಲಿ ಉಗ್ರರ ದಾಳಿ: ಮೃತರ ಆತ್ಮಕ್ಕೆ ಮೇಣದ ಬತ್ತಿ ಹಿಡಿದು ಸಂತಾಪ!
ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ದಾಳಿಯಲ್ಲಿ ಕನ್ನಡಿಗರೂ ಮೃತಪಟ್ಟಿದ್ದು, ಅವರ ಪಾರ್ಥೀವ ಶರೀರವನ್ನು ರಾಜ್ಯಕ್ಕೆ ತರಲು ಸಕಲ ಸಿದ್ಧತೆಗಳು ನಡೆದಿವೆ. ಪಾರ್ಥೀವ ಶರೀರ ರಾಜ್ಯಕ್ಕೆ ಬರುತ್ತಿದ್ದಂತೆ ಅಂತ್ಯಸಂಸ್ಕಾರಕ್ಕೆ ಸಲ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಬದುಕುಳಿದಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.