ಬೆಂಗಳೂರು:-ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಪ್ರಕರಣವನ್ನು ಪರಿಷತ್ ಶಾಸಕ ಟಿಎ ಶರವಣ ಖಂಡಿಸಿದ್ದಾರೆ.
ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೋರ್ವ ಕನ್ನಡಿಗನ ಸಾವಿನ ಶಂಕೆ – ತೇಜಸ್ವಿ ಸೂರ್ಯ ಹೇಳಿದ್ದೇನು?
ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ X ಮಾಡಿರುವ ಟಿಎ ಶರವಣ, ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರಾಯೋಜಿತ ಮುಸ್ಲಿಂ ಉಗ್ರರಿಂದ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಪ್ರವಾಸಿಗರ ಹೆಸರು ಕೇಳಿ ಐಡಿ ಕಾರ್ಡ್ ನೋಡಿ ಹಿಂದೂಗಳು ಎಂದು ಖಾತ್ರಿಪಡಿಸಿಕೊಂಡು ಗುಂಡು ಹಾರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಜೀ ಅವರ ನೇತೃತ್ವದ ನಮ್ಮ ಕೇಂದ್ರ ಸರ್ಕಾರ ಉಗ್ರರ ಈ ಹೇಯಕೃತ್ಯಕ್ಕೆ ತಕ್ಕ ಉತ್ತರ ನೀಡಲಿದೆ. ಈ ದಾಳಿಯಲ್ಲಿ ಶಿವಮೊಗ್ಗದ ಪ್ರವಾಸಿಗರೊಬ್ಬರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
ಇನ್ನೂ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ, ಕಳೆದ ಕೆಲವು ವರ್ಷಗಳಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.