ಬೆಂಗಳೂರು : ಜಮ್ಮುಕಾಶ್ಮೀರದಲ್ಲಿನ ಪಹಲ್ಗಾಮ್‌ನಲ್ಲಿನ ಭಯೋತ್ಪಾದಕರ ದಾಳಿಯನ್ನು ಸಂಸದ ಬಸವರಾಜ್ ಬೊಮ್ಮಾಯಿ ಖಂಡಿಸಿದ್ದಾರೆ.
ಜಮ್ಮುಕಾಶ್ಮೀರದಲ್ಲಿ ಉಗ್ರರ ದಾಳಿ ಬಗ್ಗೆ ರಾಜಕೀಯ ಮಾಡಲ್ಲ ; ಸಚಿವ ಸಂತೋಷ್ ಲಾಡ್
ಉಗ್ರ ದಾಳಿ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಂಸದ ಬಸವರಾಜ್ ಬೊಮ್ಮಾಯಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ಹಲ್ಲೆ ಮಾಡಿರುವುದು ಇದೊಂದು ಹೇಯ ಕೃತ್ಯ ಮತ್ತು ಇದು ಭಯೋತ್ಪಾದನೆ ಮರುಸ್ಥಾಪಿಸುವ ಪ್ರಯತ್ನ. ಇದನ್ನು ಪ್ರತಿಯೊಬ್ಬ ನಾಗರಿಕರು ಖಂಡಿಸುತ್ತೇವೆ. ಧರ್ಮದ ಹೆಸರು ಕೇಳಿ ಗುಂಡು ಹಾರಿಸಿರುವುದು ಭಾರತದ ವಿರೋಧಿ ಶಕ್ತಿಗಳ ಕೈವಾಡ ಇರುವುದು ಬಹಳ ಸ್ಪಷ್ಟ. ಇದನ್ನು ಕೂಡಲೇ ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಮಟ್ಟ ಹಾಕಬೇಕು. ಮತ್ತು ಜಮ್ಮು ಕಾಶ್ಮೀರ ಕಣಿವೆಯಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರಲು ರಾಜ್ಯ ಸರ್ಕಾರ ಎಲ್ಲ ವ್ಯವಸ್ಥೆಯನ್ನು ಮಾಡಬೇಕು. ಘಟನೆಯಲ್ಲಿ ಮೃತರಾದವರ ಕುಟುಂಬದವರಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಭಗವಂತ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಪೋಸ್ಟ್ ಮಾಡಿದ್ದಾರೆ.