ಶ್ರೀನಗರ:- ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಭಾರತ ತನ್ನ ಕೆಲಸ ಆರಂಭಿಸಿದೆ. ಲಷ್ಕರ್-ಎ-ತೊಯ್ಬಾ ಉಗ್ರಗಾಮಿಗಳಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಅವರ ಮನೆಗಳನ್ನು ಸ್ಫೋಟಿಸಿ ಧ್ವಂಸ ಮಾಡಿದೆ. ಇವರಿಬ್ಬರೂ ಪಹಲ್ಗಾಮ್ ದಾಳಿಯ ಪ್ರಮುಖ ಆರೋಪಿಗಳಾಗಿದ್ದರು.
ಇನ್ನೂ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ತನಿಖೆ ಹೊಣೆಯನ್ನು NIAಗೆ ವಹಿಸಿದೆ. ಹೀಗಾಗಿ ಪ್ರಕರಣ ದಾಖಲಿಸಿಕೊಂಡಿರುವ NIA ಟೀಮ್, ಅಧಿಕೃತವಾಗಿ ತನಿಖೆಗೆ ಇಳಿದಿದೆ.
ತನಿಖೆಗೆ ನಿಯೋಜಿಲ್ಪಟ್ಟ ಎನ್‌ಐಎ ತಂಡ ಈಗಾಗಲೇ ಪಹಲ್ಗಾಮ್ ತಲುಪಿದೆ, ದಾಳಿ ನಡೆದ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಜೊತೆಗೆ ತನಿಖಾ ಏಜೆನ್ಸಿಯ ವಿಧಿವಿಜ್ಞಾನ ಪ್ರಯೋಗಾಲಯ ತಂಡವು ಸ್ಥಳದಲ್ಲಿದ್ದು ಸಾಕ್ಷ್ಯಗಳನ್ನು ಸಂಗ್ರಹಿಸುವಲ್ಲಿ ನಿರತವಾಗಿದೆ. ಮತ್ತೊಂದೆಡೆ ಸ್ಥಳೀಯ ಪೊಲೀಸರಿಂದ ಪ್ರಕರಣದ ಡೈರಿ, ಎಫ್‌ಐಆರ್ ಮತ್ತು ಈ ವಿಷಯಕ್ಕೆ ಸಂಬಂಧಿಸಿದ ಇತರ ಪ್ರಮುಖ ದಾಖಲೆಗಳನ್ನ ಸುಪರ್ಧಿಗೆ ಪಡೆದುಕೊಳ್ಳಲು NIA ಮುಂದಾಗಿದೆ.