ಬೆಂಗಳೂರು/ಶ್ರೀನಗರ:- ಜಿಲ್ಲೆಯ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಉಗ್ರರ ಅಟ್ಟಹಾಸಕ್ಕೆ ಸಾವನ್ನಪ್ಪಿದವರ ಸಂಖ್ಯೆ ಏರಿಕೆ ಆಗುತ್ತಿದೆ. ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಕೂಡ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಿ, ಉಗ್ರರ ಅಟ್ಟಹಾಸಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.
ಪ್ಯಾಂಟ್ ಬಿಚ್ಚಿ ಕತ್ನಾ ಆಗಿದೀಯಾ ಅಂತ ನೋಡಿ ಕೊಲೆ ಮಾಡ್ತಾರೆ: ಉಗ್ರರ ದಾಳಿ ಬಗ್ಗೆ ಸೂಲಿಬೆಲೆ ಪ್ರತಿಕ್ರಿಯೆ!
ಭರತ್ ಭೂಷಣ್, ಪತ್ನಿ, ಹಾಗೂ ಮೂರು ವರ್ಷದ ಮಗ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ನಾಲ್ಕೈದು ದಿನಕ್ಕೆ ಪ್ರವಾಸಕ್ಕೆ ತೆರಳಿದ್ದ ಕುಟುಂಬ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಮಂಗಳವಾರ ನಡೆದ ಉಗ್ರರ ಗುಂಡಿನ ದಾಳಿಯಿಂದ ಭರತ್ ಭೂಷಣ್ ಪ್ರಾಣಪಕ್ಷಿ ಹಾರಿಹೋಗಿದೆ.
ಪಹಲ್ಗಾಮ್ನಲ್ಲಿ ಪ್ರವಾಸದಲ್ಲಿದ್ದ ವೇಳೆ ಮಂಗಳವಾರ ಮಧ್ಯಾಹ್ನ ಏಕಾಏಕಿ ಉಗ್ರರ ದಾಳಿ ನಡೆದಿದೆ. ಈ ವೇಳೆ ದಾಳಿಯಾದ ಸ್ಥಳದಲ್ಲೇ ಇದ್ದ ಭೂಷಣ್ ಕುಟುಂಬ, ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿಹೋಗಿದ್ದಾರೆ. ಅಲ್ಲೇ ಇದ್ದ ಮರವೊಂದರ ಬಳಿ ಮಗು ಜೊತೆ ಅವಿತುಕುಳಿತಿದ್ದ ಭರತ್ ಭೂಷಣ್ಗೆ ಉಗ್ರರು ನೇರ ಶೂಟ್ ಮಾಡಿದ್ದಾರೆ. ಬುಲೆಟ್ ನೇರ ಭೂಷಣ್ ತಲೆಗೆ ಬಿದ್ದಿದ್ದು, ಸ್ಥಳದಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.