ಬೆಂಗಳೂರು: ಸ್ವರ್ಗ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಏಪ್ರಿಲ್ 22ರಂದು ಉಗ್ರರು ಅಟ್ಟಹಾಸ ಮೆರೆದಿದ್ದರು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಇದರ ಅಡಿಯಲ್ಲಿ ರಾತ್ರೋರಾತ್ರಿ ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ.
ಇನ್ನೂ ಈ ವಿಚಾರವಾಗಿ ಜಗ್ಗೇಶ್ (Jaggesh) ಕೂಡ ಕೊಂಡಾಡಿದ್ದಾರೆ. ಮೋದಿ (Narendra Modi) ಭಾರತದ ಪ್ರಚಂಡ ಎಂದು ಜಗ್ಗೇಶ್ ಕವನ ಮೂಲಕ ಧನ್ಯವಾದ ತಿಳಿಸಿದ್ದಾರೆ.
View this post on Instagram
ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಬಲಿಯಾಗಿದ್ದರು. ಇದೀಗ ಆಪರೇಷನ್ ಸಿಂಧೂರ ಕಾರ್ಯಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.