ಹುಬ್ಬಳ್ಳಿ: ಕೇಂದ್ರ ಸರ್ಕಾರ ಪರೀಕ್ಷೆ ನಡೆಸಿದ್ರು ಅದನ್ನು ನಡೆಸೋದು ರಾಜ್ಯ ಸರ್ಕಾರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ಸಿ ಪರೀಕ್ಷೆ ಕುರಿತು ಮಾತನಾಡಿ,
ಕೆಪಿಎಸ್ಸಿ ಪರೀಕ್ಷೆಯಲ್ಲಿ ಎಂಬತ್ತು ಪ್ರಶ್ನೆಗಳೇ ತಪ್ಪು ಇದ್ದವು. ನಾವು ಪ್ರಶ್ನೆ ಮಾಡಿದ್ರೆ ಅವರಿಗೆ ಮೆಣಸಿನಕಾಯಿ ಹೊಡೆದಂಗೆ ಆಗುತ್ತದೆ. ಅವರು ಬಂಡತನದ ಪರಮಾವಧಿ ತೋರಿಸುತ್ತಿದ್ದಾರೆ. ಸಿದ್ದರಾಮಯ್ಯ 5 ವರ್ಷ ಜಾತ್ರೆ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ರನ್ನ ದೂರವಿಡಲು ಏನೇನೋ ಮಾತನಾಡುತ್ತಿದ್ದಾರೆ.
Red Blood Cells: ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸಿ!
ಕೇಂದ್ರ ಸರ್ಕಾರ ಯಾವುದೇ ಮಾರ್ಗದರ್ಶನ ನೀಡಿಲ್ಲ. ಕೇಂದ್ರ ಸರ್ಕಾರ ಪರೀಕ್ಷೆ ನಡೆಸಿದ್ರು ಅದನ್ನು ನಡೆಸೋದು ರಾಜ್ಯ ಸರ್ಕಾರ. ಈ ಬಗ್ಗೆ ದೂರು ಕೂಡಾ ದಾಖಲು ಮಾಡಲಾಗಿದೆ ಅಂತ ಹೇಳಿದ್ದಾರೆ ಎಂದರು.
ಮಹದಾಯಿಗೆ ಸಮಗ್ರ ಯೋಜನಾ ವರದಿ(ಡಿಪಿಆರ್) ಕೊಡಿಸಿದ್ದೇವೆ. ಪರಿಸರ ಅನುಮತಿ ಕೂಡಾ ಕೊಡಿಸಿದ್ದೇವೆ. ಆದರೆ ಸಮಸ್ಯೆ ಬಂದಿರೋದು ವನ್ಯಜೀವಿ ಮಂಡಳಿಯದ್ದು. ಈ ವಿಷಯ ಸುಪ್ರೀಂ ಕೋರ್ಟ್ನಲ್ಲಿದೆ. ಗೋವಾ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿದೆ. ಇಲ್ಲಿಯವರೆಗೆ ಮಹದಾಯಿ ಬಗ್ಗೆ ನೀವು ಏನು ಮಾಡಿದ್ದೀರಿ ಹೇಳಿ ಎಂದರು.