ದೊಡ್ಡಬಳ್ಳಾಪುರ: ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕದ್ದು ದುಷ್ಕರ್ಮಿಗಳು ಪರಾರಿಯಾದ ಘಟನೆ ದೊಡ್ಡಬಳ್ಳಾಪುರದ ಮಾರಸಂದ್ರ ಅಪಾರ್ಟ್ಮೆಂಟ್ ಬಳಿ ನಡೆದಿದೆ. ದೊಡ್ಡಬಳ್ಳಾಪುರದ ಕಲ್ಲುಪೇಟೆಯ ರಮೇಶ್ ದಂಪತಿಗಳು ಚಿನ್ನದ ಸರ ಕಳೆದುಕೊಂಡ ನಿವಾಸಿಗಳಾಗಿದ್ದು,
5ಲಕ್ಷ ಬೆಲೆ ಬಾಳುವ 45 ಗ್ರಾಂ ತೂಕವಿರುವ ಚಿನ್ನದ ಸರವಾಗಿದೆ. ಅನಾರೋಗ್ಯದ ಹಿನ್ನೆಲೆ ದಂಪತಿಗಳು ರಾಜನಕುಂಟೆ ಆಸ್ಪತ್ರೆಗೆ ತೆರಳಿದ್ದರು. ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗುವಾಗ ದುರ್ಘಟನೆ ನಡೆದಿದ್ದು,
ಬಿಯರ್ ಕುಡಿದರೆ ಕಿಡ್ನಿ ಸ್ಟೋನ್ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!
ನಂಬರ್ ಪ್ಲೇಟ್ ಇಲ್ಲದ ಬೈಕ್, ಮುಖಕ್ಕೆ ಮಾಸ್ಕ್,ಹೆಲ್ಮಟ್ ಧರಿಸಿ ಬಂದು ಕಳ್ಳತನ ಮಾಡಿದ್ದಾರೆ. ಕಳ್ಳರ ಕೈಚಳಕದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.