ಬೆಂಗಳೂರು: ದೇಶಾದ್ಯಂತ ಶಾಲೆಗಳಿಗೆ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆಗಳು ಬರುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ನಕಲಿ ಬೆದರಿಕೆ ಕರೆ ಎಂದು ತಿಳಿದಿದ್ದರೂ ಉದಾಸೀನ ಮಾಡುವಂತಿಲ್ಲ.
ನೀವು ಕೂಡ ಜಾಸ್ತಿ ಉಪ್ಪಿನಕಾಯಿ ತಿಂತೀರಾ!? ಹಾಗಿದ್ರೆ ಈ ಸಮಸ್ಯೆಗಳು ಗ್ಯಾರಂಟಿ!
ನಗರದಲ್ಲಿ ಕುಂಬಳಗೋಡು, ಕಲಾಸಿಪಾಳ್ಯ ಮತ್ತು ರಾಜರಾಜೇಶ್ವರಿ ನಗರದಲ್ಲಿ ಇರುವ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಸ್ಥಳೀಯ ಪೋಲಿಸರು ತಕ್ಷಣವೇ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೈದರಾಬಾದ್ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಬಾಂಬ್ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.