ಕೋಲಾರ – ಪರಿಶಿಷ್ಟ ಜಾತಿಯ ಒಳ ಮಿಸಲಾತಿ ಕುರಿತಂತೆ ಮೇ 5 ರಿಂದ 17 ರವರೆಗೆ 12 ದಿನಗಳ ಕಾಲ ಜಿಲ್ಲೆಯಾದ್ಯಂತ ಶಿಕ್ಷಕ ಗಣತಿದಾರರ ಮೂಲಕ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತಿದ್ದು ಪರಿಶಿಷ್ಟ ಜಾತಿ ಸಮುದಾಯದವರು ಸ್ವಯಂ ಪ್ರೇರಿತವಾಗಿ ಮಾಹಿತಿ ಹಾಗೂ ವಿವರವನ್ನು ಗಣತಿದಾರರರಿಗೆ ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ನೆಡೆದ ಪರಿಶಿಷ್ಟ ಜಾತಿಯ ಒಳಮಿಸಲಾತಿ ಸಮೀಕ್ಷೆಯ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರದಿಂದ ನೇಮಕವಾಗಿರುವ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹ ಮಾಡಿ ಶೇಖರಿಸುವ ಸಂಬಂಧ ರಾಜ್ಯದಾದ್ಯಂತ ಸಮೀಕ್ಷೆ ನಡೆಸಲು ತೀರ್ಮಾನಿಸಿರುತ್ತದೆ,
Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!
ಅದಂತೆ ಕೋಲಾರ ಜಿಲ್ಲೆಯಾದ್ಯಂತ ಮೇ 5 ರಿಂದ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಈ ಸಮೀಕ್ಷೆಯನ್ನು ಜಿಲ್ಲೆಯಲ್ಲಿರುವ ಮತಗಟ್ಟೆಗೆ ಒಬ್ಬರಂತೆ ಗಣತಿದಾರರನ್ನು ನೇಮಕ ಮಾಡಲಾಗುತ್ತದೆ. ಈ ಗಣತಿದಾರರನ್ನಾಗಿ ಕೇವಲ ಪ್ರೌಢಶಾಲಾ ಶಿಕ್ಷಕರನ್ನು ಮಾತ್ರವೇ ನೇಮಿಸಲಾಗುತ್ತದೆ. ಆಶಾ,ಅಂಗನವಾಡಿ ಕಾರ್ಯಕರ್ತೆಯರನ್ನು ಯಾವದೇ ಕಾರಣಕ್ಕೂ ನೇಮಕ ಮಾಡಲಾಗುವುದಿಲ್ಲ ಎಂದು ತಿಳಿಸಿದರು.