ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅಸಹಜವಾಗಿ ಸಾವನ್ನಪ್ಪಿವೆ. ಈ ಪೈಕಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಇವೆ. ಹುಲಿಗಳ ಅಸಹಜ ಸಾವು ಘಟನೆಯನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.
ಹುಲಿಗಳ ನಾಡು ಚಾಮರಾಜನಗರದಲ್ಲಿ ಬರೋಬ್ಬರಿ ಐದು ಹುಲಿಗಳು ಮೃತಪಟ್ಟಿವೆ. ವಿಷಪ್ರಾಶನದಿಂದ ಹುಲಿಗಳು ಸಾವನ್ನಪ್ಪಿವೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹುಲಿಗಳ ಸಂಖ್ಯೆ ಕ್ಷೀಣಿಸುತ್ತಿರುವ ಈ ದಿನಗಳಲ್ಲಿ, ಐದು ಹುಲಿಗಳನ್ನು ವಿಷವಿಕ್ಕಿ ಕೊಂದಿರುವುದು ಆಘಾತಕಾರಿಯಾಗಿದೆ.
ನಿಮ್ಮ ಡೊಳ್ಳು ಹೊಟ್ಟೆ ಚಪ್ಪಟೆ ಆಗಲು ಕಾಫಿ ಟೀ ಬದಲು ಬೆಳಗೆದ್ದು ಈ ನೀರು ಕುಡಿಯಿರಿ!
ಈ ಸಂಬಂಧ ಸಂಭಂದ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಆಶ್ವಾಸನೆ ನೀಡಿದೆ. ಹುಲಿಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ ನಿಖರ ಕಾರಣ ಏನೆಂಬುದು ಗೊತ್ತಾಗಲಿದೆ.
ಹುಲಿ ಸಾವು ಸಂಬಂಧ ಮೀಣ್ಯಂ ಅರಣ್ಯ ಪ್ರದೇಶ ಸಮೀಪದ ಗ್ರಾಮಸ್ಥರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಪೊಲೀಸರು ಗ್ರಾಮಸ್ಥರನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ಮಾಹಿತಿ ಕಲೆಹಾಕುತ್ತಿದ್ದಾರೆ. ಹಸುವಿನ ಕಳೇಬರದ ಬಳಿ ಕರೆದುಕೊಂಡು ಹೋಗಿ ಯಾರು ಅದರ ಮಾಲೀಕರು ಎಂಬುದನ್ನೂ ವಿಚಾರಣೆ ಮಾಡಲಾಗುತ್ತಿದೆ.