ಬೆಂಗಳೂರು: ಇತ್ತೀಚಿಗೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಅಂತ ಪದೇಪದೆ ಹೇಳುತ್ತಾ ಕೊಂಚ ಜಾಸ್ತಿಯೇ ನಿಷ್ಠೆ ಪ್ರದರ್ಶಿಸುತ್ತಿದ್ದಾರೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಾವುದೇ ನಾಯಕತ್ವ ಬದಲಾವಣೆ ಇಲ್ಲ.
ನೀವು HDFC ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ಹಾಗಾದ್ರೆ ಈ ಪ್ರಮುಖ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು!
ನಾವೆಲ್ಲರೂ ಒಗ್ಗಟ್ಟಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸುತ್ತೇವೆ.” ಈ ಹೇಳಿಕೆಯ ಮೂಲಕ, ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಒಳಗೊಳಗಿನ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ. ಇತ್ತೀಚೆಗೆ, ಕೆಲವು ಶಾಸಕರಿಂದ ಸಿಎಂ ಬದಲಾವಣೆಯ ಕುರಿತಾದ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬಂದಿದ್ದವು.
ಈ ಹಿನ್ನೆಲೆಯಲ್ಲಿ, ಶಿವಕುಮಾರ್ ಅವರ ಈ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಇನ್ನೂ ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಡಿಕೆ ಶಿವಕುಮಾರ್, “ಇಕ್ಬಾಲ್ ಹುಸೇನ್‌ಗೆ ನಾನು ನೋಟೀಸ್ ಇಶ್ಯೂ ಮಾಡುತ್ತೇನೆ. ಇನ್ಮುಂದೆ ಯಾರೂ ಕೂಡ ಮಾಧ್ಯಮಗಳ ಮುಂದೆ ಇಂತಹ ಹೇಳಿಕೆಗಳನ್ನು ನೀಡಬಾರದು” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.