ರಾಮನಗರ: ಏಕಾಏಕಿ ಜಾತಿಗಣತಿ ಸ್ವೀಕಾರ ಮಾಡುವುದಕ್ಕಿಂತ ಮೊದಲು ಚರ್ಚೆ ಆಗಬೇಕು ಎಂದು ಸಂಸದ ಡಾ.ಮಂಜುನಾಥ್ ಹೇಳಿದ್ದಾರೆ. ರಾಮನಗರದಲ್ಲಿ ಜಾತಿಗಣತಿ ವರದಿ ಸ್ವೀಕಾರಕ್ಕೆ ಮುಂದಾಗಿರುವ ವಿಚಾರದ ಕುರಿತು ಮಾತನಾಡಿದ ಅವರು,
ಸಾಮಾಜಿಕ ಹಾಗೂ ಶೈಕ್ಷಣಿಕ ಮಟ್ಟದ ಬಗ್ಗೆ ಸಮೀಕ್ಷೆ ಮಾಡಿ. ಆದರೆ ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸುವ ಕೆಲಸ ಮಾಡಬೇಡಿ. ಎಲ್ಲಾ ಜಾತಿಯಲ್ಲೂ ಬಡವರಿದ್ದಾರೆ. ಎಲ್ಲರನ್ನೂ ಮೇಲೆತ್ತುವ ಕೆಲಸ ಆಗಬೇಕು. ಏಕಾಏಕಿ ಜಾತಿಗಣತಿ ಸ್ವೀಕಾರ ಮಾಡುವುದಕ್ಕಿಂತ ಮೊದಲು ಚರ್ಚೆ ಆಗಬೇಕು.
ಹುಡುಗಿಯರೇ ನೀವು ಕೂಡ ಮೆಡಿಮಿಕ್ಸ್ ಸೋಪ್ ಬಳಸ್ತಿದ್ದೀರಾ? ಇದು ಖಂಡಿತ ನಿಮಗಲ್ಲ!
ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚೆ ಮಾಡಬೇಕು. ತಜ್ಞರು, ಚಿಂತಕರು ಹಾಗೂ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು. ಶಾಸಕಾಂಗ ಸಮಿತಿ ರಚನೆ ಮಾಡಿ ಈ ಬಗ್ಗೆ ಪರಿಶೀಲನೆ ಮಾಡಬೇಕು. ಸರ್ಕಾರದ ಆತುರದ ನಿರ್ಧಾರ ಸರಿಯಲ್ಲ ಎಂದು ತಿಳಿಸಿದರು.