ವಿಜಯಪುರ: ನವೆಂಬರ್, ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ನಲ್ಲಿ ಮಹಾ ಸ್ಫೋಟವಾಗಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಲಿಂಗಾಯತ, ಒಕ್ಕಲಿಗರು, ದಲಿತರನ್ನು ಒಡೆಯುವ ಹುನ್ನಾರ ಇದು. ಮುಸ್ಲಿಮರನ್ನು ಪ್ರೊಜೆಕ್ಟ್ ಮಾಡಲು ಜಾತಿ ಗಣತಿ ಮಂಡನೆ ಮಾಡಿದ್ದಾರೆ.
ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ದಿಕ್ಕಿನಲ್ಲಿ ಪೊರಕೆಯನ್ನು ಇಡಬಾರದು..! ಏನಾಗುತ್ತೆ ಗೊತ್ತಾ..?
ಕಾಂಗ್ರೆಸ್‌ನಲ್ಲಿ ಆಂತರಿಕ ಯುದ್ಧ ನಡೆಯುತ್ತದೆ. ಸಿದ್ದರಾಮಯ್ಯ ಬಳಿಕ ಡಿಕೆಶಿ ಪಟ್ಟ ಏರಲು ಕಾಯುತ್ತಿದ್ದಾರೆ. ನವೆಂಬರ್, ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ನಲ್ಲಿ ಮಹಾ ಸ್ಫೋಟವಾಗಲಿದೆ. ಟೈಂ ಬಾಂಬ್ ಸ್ಫೋಟವಾಗಲಿದೆ. ಅಧಿಕಾರದಲ್ಲಿ ಮುಂದುವರೆಯಲು ಗೊಂದಲ ಸೃಷ್ಟಿಸಿದ್ದಾರೆ. ಡಿಕೆಶಿ ನವೆಂಬರ್, ಡಿಸೆಂಬರ್‌ಗೆ ಟೈಂ ಬಾಂಬ್ ಫಿಕ್ಸ್ ಮಾಡಿದ್ದಾರೆ. ಅದು ಸ್ಫೋಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಈ ಹಿಂದೆಯೆ ಜಾತಿ ಜನಗಣತಿ ಮಂಡನೆ ಮಾಡಬೇಕಿತ್ತು. ಅಂದಿನಿಂದಲೂ ವಿವಾದಾಸ್ಪದ ವರದಿ ಇದು. ಆಯೋಗ ಮಾಡಿದ್ದೇ ಸಿದ್ದರಾಮಯ್ಯ. ಅಂದು ಯಾಕೆ ಸ್ವೀಕಾರ ಮಾಡಲಿಲ್ಲ? ಅಂದೆ ಕ್ಯಾಬಿನೆಟ್‌ನಲ್ಲಿ ಇಡಬೇಕಿತ್ತು ಎಂದು ಹೇಳಿದರು.