ಚಿಕ್ಕಬಳ್ಳಾಪುರ:- ನಂದಿಬೆಟ್ಟಕ್ಕೆ ಐದು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜೂ.19ರಂದು ನಂದಿಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆ ಐ ದು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ
ಜೂ.16ರ ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳನ್ನ ಮುಂಗಡ ಕಾಯ್ದಿರಿಸುವಿಕೆಗೂ ನಿಷೇಧ ವಿಧಿಸಿದ್ದಾರೆ.
ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಐದು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೂ ಬ್ರೇಕ್ ಹಾಕಲಾಗಿದೆ