ಶಿವಮೊಗ್ಗ : ಮಂಗನ ಕಾಯಿಲೆಯಿಂದ 8 ವರ್ಷದ ಬಾಲಕನ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ದತ್ತರಾಜಪುರ ಗ್ರಾಮದ ರಾಮು ಹಾಗೂ ಮಮತಾ ಎಂಬವರ ಮಗ ರಚಿತ್ ಮಂಗನ ಖಾಯಿಲೆಗೆ ಬಲಿಯಾಗಿದ್ದಾನೆ.
ಮಂಗನ ಖಾಯಿಲೆ ಸೋಂಕಿಗೆ ತುತ್ತಾಗಿದ್ದ ಬಾಲಕನನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ. ಆ ಮೂಲಕ ತೀರ್ಥಹಳ್ಳಿ ತಾಲೂಕಿನಲ್ಲಿ ಈ ವರ್ಷ ಮಂಗನ ಕಾಯಿಲೆಗೆ ಇಬ್ಬರು ಸಾವನ್ನಪ್ಪಿದ್ದಾರೆ.
ಇನ್ನೂ ಬಾಲಕ ಸಾವಿನ ಕುರಿತು ಒಂದು ವಾರದಲ್ಲಿ ಡೆತ್ ಅಡಿಟ್ ವರದಿ ನೀಡಲು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಬೇಸಿಗೆ ತಿಂಗಳಲ್ಲಿ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು, ಮಂಗನ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸದ್ಯ ಮಂಗನ ಕಾಯಿಲೆ ಉಲ್ಭಣದಿಂದಾಗಿ ಕಾಡಿನಂಚಿನಲ್ಲಿ ನೆಲಸಿರುವ ಗ್ರಾಮಸ್ಥರು ಆತಂಕದಲ್ಲಿದ್ದಾರೆ.