ನವದೆಹಲಿ: ಇದೊಂದು ಬೇಜವಾಬ್ದಾರಿ ರಾಜ್ಯ ವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ತಮ್ಮ ವೈಫಲ್ಯ ಮುಚ್ಚಿಕೊಂಡು ಸರ್ಕಾರ ಕೊಡಬೇಕಾದ ಪ್ರೋತ್ಸಾಹಧನವನ್ನು ಕೆಎಂಎಫ್‌ಗೆ 4 ರೂ. ಹಾಲಿನ ದರ ಹೆಚ್ಚಳ ಮಾಡಿ, ಜನರ ಮೇಲೆ ಭಾರ ಹೇರಿದೆ.
ವರ್ಷದಲ್ಲಿ ಮೂರು ಬಾರಿ 9 ರೂ. ಹೆಚ್ಚಳ ಮಾಡಿದ್ದಾರೆ. ಇದೊಂದು ಬೇಜವಾಬ್ದಾರಿ ರಾಜ್ಯ ವಿರೋಧಿ ಸರ್ಕಾರವಾಗಿದೆ. ರಾಜ್ಯವನ್ನು ದಿವಾಳಿ ಮಾಡಿ ಆರ್ಥಿಕವಾಗಿ ಸದೃಢವಾಗಿರುವ ರಾಜ್ಯವನ್ನು ಆರ್ಥಿಕವಾಗಿ ಅತ್ಯಂತ ದುರ್ಬಲವಾಗಿರುವ ರಾಜ್ಯವನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ವಾಸ್ತು ಪ್ರಕಾರ ಈ ದಿಕ್ಕಿನಲ್ಲಿ ಮಲಗಿ: ಜೀವನದಲ್ಲಿ ಅನಿರೀಕ್ಷಿತ ಅದೃಷ್ಟ ನಿಮ್ಮದಾಗುತ್ತೆ.!
ಇಷ್ಟೆಲ್ಲಾ ಆದರೂ ರಾಜ್ಯ ಸರ್ಕಾರ ಭಂಡತನಕ್ಕೆ ಬಿದ್ದಿದೆ. ವಿದ್ಯುತ್ ದರ ಹೆಚ್ಚಳ ಮಾಡಿದೆ. ಡಿಜಿಟಲ್ ಮೀಟರ್ ಅಳವಡಿಕೆ ದೊಡ್ಡ ಹಗರಣವಾಗಿದೆ. ಪೆಟ್ರೋಲ್, ಡಿಸೇಲ್, ಮುದ್ರಾಕ ನೋಂದಣಿ ಶುಲ್ಕ ಎಲ್ಲವನನ್ನೂ ಹೆಚ್ಚಳ ಮಾಡಿದ್ದಾರೆ.
ಅಬಕಾರಿ ತೆರಿಗೆ ದರವಂತೂ ಲೆಕ್ಕವಿಲ್ಲದಷ್ಟು ಹೆಚ್ಚಳ ಮಾಡಿದ್ದಾರೆ. ಕಳೆದ ವರ್ಷ ಸುಮಾರು 40 ಸಾವಿರ ಕೋಟಿ ರೂ. ಹೆಚ್ಚಿನ ತೆರಿಗೆ ಭಾರವನ್ನು ಜನರ ಮೇಲೆ ಹಾಕಿದ್ದಾರೆ. ಈಗ ಸುಮಾರು 55 ಸಾವಿರ ಕೋಟಿ ರೂ. ಹೊಸ ತೆರಿಗೆ ಮೂಲಕ ಜನರ ಮೇಲೆ ಹಾಕಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.