ದೆಹಲಿಯಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು.
ಗ್ಯಾರಂಟಿಗಳಿಂದ ಖಜಾನೆ ಖಾಲಿ ಆಗಿಲ್ಲ: ಬಿಜೆಪಿಯವರ ಮಾತು ನಂಬೇಡಿ: ಸಿದ್ದರಾಮಯ್ಯ!
ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 162 ರನ್ ಕಲೆಹಾಕಿತು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.3 ಓವರ್ಗಳಲ್ಲಿ ಚೇಸ್ ಮಾಡಿ 6 ವಿಕೆಟ್ಗಳ ಗೆಲುವು ದಾಖಲಿಸಿದೆ.
ಗೆಲುವಿನ ಬಳಿಕ ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಎಲ್ ರಾಹುಲ್ ಅವರ ಕಾಲೆಳೆದಿದ್ದಾರೆ. ಪಂದ್ಯದ ಬಳಿಕ ಭೇಟಿಯಾದ ಕೆಎಲ್ ರಾಹುಲ್ ಮುಂದೆ ಇದು ನನ್ನ ಮೈದಾನ ಎಂಬ ಸೆಲೆಬ್ರೇಷನ್ ತೋರಿಸುವ ಮೂಲಕ ಕೊಹ್ಲಿ ಕಿಚಾಯಿಸಿದ್ದಾರೆ. ಈ ವೇಳೆ ರಾಹುಲ್ ಹೌದು, ನಿಮ್ಮದೇ ಮೈದಾನ ಎಂದು ಪೆವಿಲಿಯನ್ ಮೇಲಿರುವ ಕೊಹ್ಲಿಯ ಹೆಸರನ್ನು ತೋರಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ರಾಹುಲ್ ಅವರಿಂದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ ನಗುತ್ತಾ ಕೊಹ್ಲಿ ತಬ್ಬಿಕೊಂಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ಪಡೆದುಕೊಂಡಿದ್ದಾರೆ.