ಬೆಂಗಳೂರು: ಈ ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಯಾವುದೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಸಿಲ್ಕ್ ಬೋರ್ಡ್ನ ಮಳೆ ಹಾನಿ ಪ್ರದೇಶಗಳಿಗೆ ಬಿಜೆಪಿ ನಿಯೋಗ ಮಂಗಳವಾರ ಭೇಟಿ ನೀಡಿ, ಮಳೆ ಹಾನಿಗೆ ಕಾರಣ, ಆಗಿರುವ ಹಾನಿ ಕುರಿತು ಪರಿಶೀಲನೆ ನಡೆಸಿ ಮಾತನಾಡಿದ ಅವರು,
ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳ ಕಡೆ ಮುಖ್ಯಮಂತ್ರಿಗಳು ಗಮನ ಕೊಡಬೇಕು. ಕೆಲಸಗಳನ್ನು ತ್ವರಿತ ಗತಿಯಲ್ಲಿ ಮುಗಿಸಬೇಕು. ರಾಜ್ಯ ಸರ್ಕಾರ ಒಂದು ಅಯೋಗ್ಯ ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಯಾವುದೂ ಇಲ್ಲ ಎಂದರು.
ಕಿಡ್ನಿ ಸ್ಟೋನ್ ನೋವಿಲ್ಲದೇ ಕರಗಿ ಹೋಗ್ಬೇಕಾ!? ಹಾಗಿದ್ರೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿರಿ, ರಿಸಲ್ಟ್ ಗ್ಯಾರಂಟಿ!
ಕೆಲವೇ ಕೆಲವು ಗಂಟೆ ಮಳೆ ಬಂದ ಸಂದರ್ಭದಲ್ಲಿ ಇಡೀ ಬೆಂಗಳೂರು ಮಹಾನಗರವು ಜಲಾವೃತವಾಗಿದೆ. ನಾಲ್ಕು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯನವರು ಗ್ರೇಟರ್ ಬೆಂಗಳೂರು ಬಗ್ಗೆ ಮಾತನಾಡುತ್ತಾರೆ. ಬೆಂಗಳೂರಿಗೆ ಕೇವಲ ಗ್ರೇಟರ್ ಹೆಸರು ಸೇರಿಸಿದರೆ ಸಾಕಾಗುವುದಿಲ್ಲ ಸ್ವಾಮೀ, ಬೆಂಗಳೂರಿನ ಅಭಿವೃದ್ಧಿಗೆ ಎಷ್ಟು ಸಾವಿರ ಕೋಟಿ ಅನುದಾನ ಕೊಡಲಾಗಿದೆ ಎಂದು ಪ್ರಶ್ನಿಸಿದ್ದಾರೆ.