ವಿಜಯಪುರ: ದೇಶದ ದ್ರೋಹದ ಹೇಳಿಕೆ ಕೊಡುತ್ತಿರುವವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಡಿಸಿಎಂ ಈಶ್ವರಪ್ಪ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆ, ಸಂತೋಷ ಲಾಡ್, ದಿನೇಶ್ ಗುಂಡೂರಾವ್, ಕೊತ್ತೂರು ಮಂಜುನಾಥ, ಹರಿಪ್ರಸಾದ್ ಹೇಳಿಕೆಗೆ ಈಶ್ವರಪ್ಪ ಗುಂಡಿಟ್ಟು ಕೊಲ್ಲಿ ಎಂದು ಹೇಳಿದ್ದಾರೆ.
ಜೂನಿಯರ್ ಕಾಂಗ್ರೆಸ್ ನಾಯಕರು ಮಾತ್ರ ಟೀಕೆ ಮಾಡುತ್ತಿದ್ದಾರೆ. ಸೀನಿಯರ್ ಖರ್ಗೆ ವಿಧಿ ಇಲ್ಲದೆ ಅಲ್ಲೊಂದು ಇಲ್ಲೊಂದು ಮಾತನಾಡುತ್ತಾರೆ. ಆದ್ರೆ ಪಾಕಿಸ್ತಾನ ಪರವಾಗಿ ಮರಿ ಖರ್ಗೆ ಇದ್ದಾರೆ.
ಕಿಡ್ನಿ ಸ್ಟೋನ್ ನೋವಿಲ್ಲದೇ ಕರಗಿ ಹೋಗ್ಬೇಕಾ!? ಹಾಗಿದ್ರೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿರಿ, ರಿಸಲ್ಟ್ ಗ್ಯಾರಂಟಿ!
ಹರಿಪ್ರಸಾದ್, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್ ಅವರಂತಹ ಕೆಲವರಿಗೆ ಮಾತ್ರ ಎಲ್ಲಿ ಇದ್ದೇವೆ. ಏನು ಮಾಡುತ್ತಿದ್ದೇವೆ. ಕಾಂಗ್ರೆಸ್ ನಾಯಕರು ಹೌದೋ, ಅಲ್ವೋ ಎಂದೇ ಗೊತ್ತಾಗುತ್ತಿಲ್ಲ. ಇವರ ಬಗ್ಗೆ ಕಾಂಗ್ರೆಸ್ನವರಿಂದಲೇ ಟೀಕೆ ಕೇಳಿಬರುತ್ತಿದೆ ಎಂದರು.