ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನವವಧು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಅಪಘಾತದಲ್ಲಿ ಮೃತಪಟ್ಟ ಯುವತಿ ಶ್ವೇತಾಳ ನಿಶ್ಚಿತಾರ್ಥ ನಡೆದಿತ್ತು. ನಿಶ್ಚಿತಾರ್ಥ ಮುಗಿಸಿ ಕುಟುಂಬದವರು ವಾಪಾಸ್ ಬಾಗಲಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ತೆರಳುತ್ತಿದ್ದಾಗ ಕಾರಿಗೆ ಲಾರಿ ಡಿಕ್ಕಿ ಹೊಡೆದು ಈ ದುರಂತ ನಡೆದಿದೆ.
ಸಾಗರ ಮೂಲದ ಮೃತ ವಿಠಲ್ , ಬಾಗಲಕೋಟೆಯ ಕುಳಗೇರಿ ಕ್ರಾಸ್ ಬಳಿ ಹೊಟೇಲ್ ನಡೆಸುತ್ತಿದ್ದರು. ಮಗಳ ನಿಶ್ಚಿತಾರ್ಥ ಮುಗಿಸಿ ಸಾಗರದಿಂದ ವಾಪಸ್ ಬಾಗಲಕೋಟೆಗೆ ಮರಳುವಾಗ ದುರಂತ ನಡೆದಿದೆ. ಅಪಘಾತದಲ್ಲಿ ನವವಧು ಶ್ವೇತಾ (29), ಅಂಜಲಿ(26), ಸಂದೀಪ್ (26), ವಿಠಲ್ (55) ಶಶಿಕಲಾ (40) ಬಾರದ ಲೋಕಕ್ಕೆ ತೆರಳಿದ್ದಾರೆ.