ಯಾದಗಿರಿ: ಗ್ರಾಮಸ್ಥರು ಸೇವಿಸಿದ್ದ ಕಲುಷಿತ ನೀರಿನಿಂದ ಮೂವರು ಪ್ರಾಣ ಕಳೆದುಕೊಂಡಿದ್ದು, ಇನ್ನೂ ಆರು ಮಂದಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರಾದವರನ್ನು ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಎಂದು ಗುರುತಿಸಲಾಗಿದೆ. ಸುಮಾರು ಹತ್ತು ದಿನಗಳ ಹಿಂದೆ ಗ್ರಾಮದಲ್ಲಿ ವಾಂತಿ-ಭೇದಿ ಎಂಬ ರೋಗ ಹರಡಿತ್ತು.
ಈ ಹಣ್ಣಿಗೆ ಹೃದಯಾಘಾತ ತಡೆಯೋ ಶಕ್ತಿ ಇದೆ.. ವಾರದಲ್ಲಿ ಒಮ್ಮೆಯಾದರೂ ತಪ್ಪದೇ ಸೇವಿಸಿ!
ಪ್ರಾಥಮಿಕ ಲಕ್ಷಣಗಳನ್ನು ಗಂಭೀರವಾಗಿ ಪರಿಗಣಿಸದ ಪರಿಣಾಮವಾಗಿ ಇದೀಗ ಮೂವರ ಸಾವು ಸಂಭವಿಸಿದ್ದು, ಗ್ರಾಮದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಸದ್ಯ 20ಕ್ಕೂ ಹೆಚ್ಚು ಗ್ರಾಮಸ್ಥರು ಆರೋಗ್ಯ ತೊಂದರೆ ಅನುಭವಿಸುತ್ತಿದ್ದು,
ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ತಿಪ್ಪನಟಗಿಗೆ ತಲುಪಿದ ಆರೋಗ್ಯ ಅಧಿಕಾರಿ ರಾಜಾ ವೆಂಕಟಪ್ಪ ನಾಯಕ ಅವರು ಪರಿಸ್ಥಿತಿ ಪರಿಶೀಲನೆ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ ಬಿರಾದಾರ ಅವರ ಸೂಚನೆಯ ಮೇರೆಗೆ ತಯಾರಿಸಲಾಗುತ್ತಿದೆ. ಈ ಘಟನೆ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಗ್ರಾಮದಲ್ಲಿ ತಾತ್ಕಾಲಿಕವಾಗಿ ವೈದ್ಯಕೀಯ ಶಿಬಿರ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.