ಭುವನೇಶ್ವರ್:- ಕಾಲ್ತುಳಿತದಿಂದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಮೂವರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿಗೆ ಗಾಯವಾಗಿರುವ ಘಟನೆ ಜರುಗಿದೆ.
ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!
ಜಗನ್ನಾಥ ದೇವಸ್ಥಾನದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಶ್ರೀ ಗುಂಡಿಚಾ ದೇವಸ್ಥಾನದ ಬಳಿ ಇದ್ದಾಗ ಇಂದು ಬೆಳಗಿನ ಜಾವ 4.30 ರ ಸುಮಾರಿಗೆ ಘಟನೆ ಜರುಗಿದೆ.
ಬೆಳಗಿನ ಜಾವ 4.30 ರ ಸುಮಾರಿಗೆ ಪವಿತ್ರ ರಥಗಳು ಗುಂಡಿಚಾ ದೇವಸ್ಥಾನದಲ್ಲಿ ಇದ್ದವು ಮತ್ತು ದರ್ಶನಕ್ಕಾಗಿ ದೊಡ್ಡ ಜನಸಮೂಹ ಜಮಾಯಿಸಿತ್ತು.ಜನಸಂದಣಿ ಹೆಚ್ಚಾಗುತ್ತಿದ್ದಂತೆ, ಕೆಲವರು ಬಿದ್ದು ಕಾಲ್ತುಳಿತ ಪ್ರಾರಂಭವಾಯಿತು. ಮೂವರು ಸ್ಥಳದಲ್ಲೇ ಸಾವನ್ನಪ್ಪಿದರು. ಇವರಲ್ಲಿ ಇಬ್ಬರು ಮಹಿಳೆಯರು, ಪ್ರಭಾತಿ ದಾಸ್ ಮತ್ತು ಬಸಂತಿ ಸಾಹು ಮತ್ತು 70 ವರ್ಷದ ಪ್ರೇಮಕಾಂತ್ ಮೊಹಂತಿ ಸೇರಿದ್ದಾರೆ.
ಮೂವರೂ ಖುರ್ದಾ ಜಿಲ್ಲೆಯವರಾಗಿದ್ದು, ರಥಯಾತ್ರೆಗಾಗಿ ಪುರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪರೀಕ್ಷೆಯಿಂದ ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆ.