ಹುಬ್ಬಳ್ಳಿ: ಹುಬ್ಬಳ್ಳಿಯ ಆನಂದನಗರದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಕಾರು ಅಪಘಾತದಲ್ಲಿ ಮೂರು ವರ್ಷದ ಬಾಲಕಿ ಆಜಿಯಾ ಮೃತಪಟ್ಟಿದ್ದಾಳೆ.
ಅಲ್ತಾಫ್ ತೋರಗಲ್ ಎಂಬ ಯುವಕ ಕಾರು ಚಾಲನೆ ಮಾಡುತ್ತಿದ್ದ ವೇಳೆ ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಆಜಿಯಾ ಮೇಲೆ ಕಾರು ಹರಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣವೇ ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ. ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರು ಚಾಲಕನನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.