ಬೆಂಗಳೂರು: ಕರ್ನಾಟಕದಲ್ಲಿ ಕೆಲವೆಡೆ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದ್ದರೂ, ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಏಪ್ರಿಲ್ 2ರಿಂದ ಮಳೆ ಜೋರಾಗಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ.
Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!
ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಭಾಗಮಂಡಲದಲ್ಲಿ ಮಳೆಯಾಗಿದೆ.ಬೆಂಗಳೂರಿನ ಎಚ್ಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್
ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.