ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಲಾಮ್ನಲ್ಲಿ ಪಾಕಿಸ್ತಾನಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಪ್ರವಾಸಿಗರು ಬಲಿಯಾಗಿದ್ದರು. ಅದಕ್ಕಾಗಿ ಭಾರತೀಯ ಸೇನೆ ಪಾಕಿಸ್ತಾನ ಉಗ್ರರ ವಿರುದ್ಧ ಆಪರೇಶನ್ ಸಿಂಧೂರ್ ಕಾರ್ಯಾಚರಣೆ ನಡೆಸಿದ್ದು,
ಪ್ರತೀಕಾರದ ಬೆನ್ನಲ್ಲೇ ದೇಶಾದ್ಯಂತ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಇದೀಗ ಐಪಿಎಲ್ ಮ್ಯಾಚ್ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಲು ನೀರಿಗೆ ಒಂದು ಚಿಟಿಕೆ ಈ ಪುಡಿ ಹಾಕಿ ಕುಡಿಯಿರಿ.. ಆಮೇಲೆ ರಿಸಲ್ಟ್ ನೋಡಿ!
ಪ್ರಮುಖ ಸ್ಥಳಗಳು ಹಾಗೂ ಜನಕೇಂದ್ರಿತ ಸ್ಥಳಗಳಲ್ಲಿ ಟೈಟ್ ಸೆಕ್ಯುರಿಟಿ ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದೀಗ ಪೊಲೀಸರು ಎಲ್ಲಾ ಕಡೆಗಳಲ್ಲಿ ಹೆಚ್ಚಿನ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.
ಐಪಿಎಲ್ ಮ್ಯಾಚ್ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನ ಪ್ರತೀ ಗೇಟ್ ಬಳಿಯೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮೂರು ಪಾಳಿಗಳಲ್ಲಿ 70ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 13ರಂದು ಆರ್‌ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಪಂದ್ಯ ನಡೆಯಲಿದೆ.