ಮಂಡ್ಯ :– ಭಯೋತ್ಪಾದಕರ ವಿರುದ್ಧ ನಡೆದ ಆಪರೇಷನ್ ಸಿಂಧೂರ್‌ನಲ್ಲಿ ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ ಯೋಧರಿಗೆ ಆತ್ಮಸ್ತೈರ್ಯ ತುಂಬುವ ನಿಟ್ಟಿನಲ್ಲಿ ಮದ್ದೂರು ಪಟ್ಟಣದಲ್ಲಿ ಮೇ.21 ಬುಧವಾರ ಬೆಳಿಗ್ಗೆ 10 ಗಂಟೆಗೆ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮನ್ ಮಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಟಿಯಲ್ಲಿ ಮಾತನಾಡಿ, ಪ್ರವಾಸಿ ಮಂದಿರದ ವೃತ್ತದಿಂದ ತಿರಂಗಾ ಯಾತ್ರೆ ಆರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ತಿರಂಗಾ ಯಾತ್ರೆ ತಲುಪಿ ಬಳಿಕ ಬಹಿರಂಗ ಸಭೆ ನಡೆಯಲಿದೆ ಎಂದು ಹೇಳಿದರು.
ಕಿಡ್ನಿ ಸ್ಟೋನ್ ನೋವಿಲ್ಲದೇ ಕರಗಿ ಹೋಗ್ಬೇಕಾ!? ಹಾಗಿದ್ರೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿರಿ, ರಿಸಲ್ಟ್ ಗ್ಯಾರಂಟಿ!
ಅಮಾಯಕ ಪ್ರವಾಸಿಗರನ್ನು ಕೊಂದ ಉಗ್ರರಿಗೆ ದೇಶದ ಸೈನಿಕರು ತಕ್ಕ ಉತ್ತರವನ್ನು ನೀಡಿ ಇಡೀ ಪ್ರಪಂಚಕ್ಕೆ ದೇಶದ ಸೈನಿಕರು ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ದೇಶದ ಅಖಂಡತೆ ಮತ್ತು ಭದ್ರತೆಗೆ ಧಕ್ಕೆ ಉಂಟಾದಾಗ ನಮ್ಮ ದೇಶ ಕಾಪಾಡುವ ಹೊಣೆ ಸೈನಿಕರದ್ದಾಗಿದೆ. ಅವರಿಗೆ ಗೌರವ ಸಲ್ಲಿಸಲಿಕ್ಕೆ ಈ ಯಾತ್ರೆ ಆಯೋಜಿಸಲಾಗಿದ್ದು, ಇದನ್ನು ಒಂದು ರೀತಿಯ ಹಬ್ಬದ ವಾತಾವರಣದೊಂದಿಗೆ ತಿರಂಗಾ ಯಾತ್ರೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬೇಕೆಂದರು.
ತಿರಂಗಾ ಯಾತ್ರೆಯಲ್ಲಿ ತಾಲೂಕಿನ ಮಠಾಧೀಪತಿಗಳು,
ಮಾಜಿ ಸೈನಿಕರು, ತಾಲೂಕು ಬಿಜೆಪಿ ಮಂಡಲ ಪದಾಧಿಕಾರಿಗಳು, ಹಿಂದೂ ಪರ ಸಂಘಟನೆಗಳು, ಕಾಲೇಜು ವಿದ್ಯಾರ್ಥಿಗಳು, ಪ್ರಗತಿಪರ ಚಿಂತಕರು, ಕನ್ನಡಪರ ಸಂಘಟನೆಗಳು, ದಲಿತ ಪರ ಸಂಘಟನೆಗಳು, ಬ್ರಾಹ್ಮಣ ಮಹಾಸಭಾ, ರೈತ ಸಂಘ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಎಲ್ಲಾ ನಾಗರಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇಗುಲದ ಪ್ರಧಾನ ಅರ್ಚಕ ರಾಘವೇಂದ್ರ ರಾವ್, ಮಾಜಿ ಸೈನಿಕ ಸಂಘದ ಜಿಲ್ಲಾಧ್ಯಕ್ಷ ಮಲ್ಲರಾಜು, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ಕರವೆ ತಾಲೂಕು ಅಧ್ಯಕ್ಷ ಅಶೋಕ್, ಹಿಂದು ಜಾಗರಣಾ ವೇದಿಕೆಯ ಯೋಗಾನಂದ, ಜಿಪಂ ಮಾಜಿ ಸದಸ್ಯ ಬೋರಯ್ಯ, ಮಾಜಿ ಸೈನಿಕ ಮಿಲ್ಟ್ರಿ ಕುಮಾರ್, ಮುಖಂಡರಾದ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಶಂಕರ್, ಮಹಾಲಿಂಗು ಹಾಗೂ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ