ಪ್ರಪಂಚದಾದ್ಯಂತ ಎಲ್ಲೇ ಹೋದರೂ ಜನರು ತೂಕ ಹೆಚ್ಚಳದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬೊಜ್ಜು ಗಂಭೀರ ಸಮಸ್ಯೆಯಾಗಿದೆ. ಇಂದಿನ ಬಿಡುವಿಲ್ಲದ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯ, ಊಟ ತಿಂಡಿ ಬಗ್ಗೆ ನಾವು ಅತಿಯಾದ ನಿರ್ಲಕ್ಷ್ಯ ತೋರಿಸುತ್ತೇವೆ. ಇದರ ಪರಿಣಾಮ ಬೀಳುವುದೇ ಹೊಟ್ಟೆಯ ಮೇಲೆ. ಯಾಕೆಂದರೆ ಹೊಟ್ಟೆ ಮತ್ತು ಸೊಂಟದ ಭಾಗದಲ್ಲಿ ಕೊಬ್ಬು ಬೆಳೆದು ಬಿಡುತ್ತದೆ. ಹೀಗಾಗಿ ಮೈ ಕೈ ಮತ್ತು ದೇಹದ ಇತರ ಭಾಗಗಳು ಸಣ್ಣಗೆ ಇದ್ದರೂ ಹೊಟ್ಟೆ ಮಾತ್ರ ದುಂಡಾಗಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಹೊಟ್ಟೆಯ ಭಾಗದಲ್ಲಿ ಕೊಬ್ಬು ಸಂಗ್ರಹವಾದರೆ ಅದನ್ನು ಕರಗಿಸುವುದು ಅಷ್ಟು ಸುಲಭವಲ್ಲ.
ಕಾಲ್ತುಳಿತದ ಡ್ಯಾಮೇಜ್: ಇಂದು ಸಿಎಂ-ಡಿಸಿಎಂ ದೆಹಲಿ ಪ್ರಯಾಣ.. ದುರಂತದ ಬಗ್ಗೆ ಹೈಕಮಾಂಡ್ಗೆ ಮಾಹಿತಿ ಸಲ್ಲಿಕೆ!
ಅಧಿಕ ತೂಕದಿಂದಾಗಿ ಅನೇಕ ಮಂದಿ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ತೂಕ ಇಳಿಸಿಕೊಳ್ಳಲು ಬಹುತೇಕ ಮಂದಿ ನಾನಾ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ. ಮೇಲ್ನೋಟಕ್ಕೆ ಇದು ಸುಲಭವಾಗಿ ಕಂಡರೂ ಬಹಳ ಮಂದಿಗೆ ಇದು ಸಾಹಸವಿದ್ದಂತೆ.
ಕೆಲವರು ಜಿಮ್, ಯೋಗ, ಡಯೆಟ್, ವರ್ಕೌಟ್ ಹೀಗೆ ಹಲವಾರು ಸರ್ಕಸ್ಗಳನ್ನು ಮಾಡುವ ಮೂಲಕ ಬೆವರಿಳಿಸುತ್ತಾರೆ. ಮತ್ತೆ ಕೆಲವರು ಆಹಾರ ಪದ್ಧತಿಯನ್ನು ಅನುಸರಿಸುತ್ತಾರೆ. ಹೀಗಿದ್ದರೂ ಈ ಪ್ರಯತ್ನಗಳ ನಂತರವೂ ಕೇವಲ ಒಂದೆರಡು ಕೆಜಿಗಳಷ್ಟು ಮಾತ್ರವೇ ಇಳಿದು ನಿರಾಸೆಗೊಳ್ಳುತ್ತಾರೆ.
ಆದರೆ ಆಪಲ್ ಸೈಡರ್ ವಿನೆಗರ್ ಸೇವಿಸುವುದರಿಂದ ನಿಮ್ಮ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತದೆ ಮತ್ತು ಈ ಮೂಲಕ ನಿಮ್ಮ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಬಹುದು. ಹೌದು, 1-2 ಟೀ ಚಮಚ ಆಪಲ್ ಸೈಡರ್ ವಿನೆಗರ್ ಅನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿಗೆ ಬೆರೆಸಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ ಎಂದು ಪೌಷ್ಟಿಕತಜ್ಞ ಲವ್ನೀತ್ ಬಾತ್ರಾ ಹೇಳುತ್ತಾರೆ.
ಆಪಲ್ ಸೈಡರ್ ವಿನೆಗರ್ ನಲ್ಲಿರುವ ಅಸಿಟಿಕ್ ಆಮ್ಲವು ದೇಹದ ಚಯಾಪಚಯ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಇದು ಕ್ಯಾಲೋರಿಗಳನ್ನು ವೇಗವಾಗಿ ಸುಡುತ್ತದೆ. ಈ ಆಮ್ಲವು ಕೊಬ್ಬಿನ ಶೇಖರಣೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ ಮತ್ತು ದೇಹದಲ್ಲಿ ಈಗಾಗಲೇ ಸಂಗ್ರಹವಾಗಿರುವ ಕೊಬ್ಬನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ.
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಹೊಟ್ಟೆ ದೀರ್ಘಕಾಲದವರೆಗೆ ತುಂಬಿರುತ್ತದೆ. ಇದು ದಿನವಿಡೀ ಹಸಿವನ್ನು ಕಡಿಮೆ ಮಾಡುತ್ತದೆ ಮತ್ತು ಅತಿಯಾಗಿ ತಿನ್ನುವುದನ್ನು ತಡೆಗಟ್ಟುತ್ತದೆ. ಹೊಟ್ಟೆಯ ಬೊಜ್ಜನ್ನು ಕಡಿಮೆ ಮಾಡುವುದರೊಂದಿಗೆ, ಆಪಲ್ ಸೈಡರ್ ವಿನೆಗರ್ ಅನ್ನು ನಿಯಮಿತವಾಗಿ ತೆಗೆದುಕೊಳ್ಳುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದು ಜೀರ್ಣಕಾರಿ ಕಿಣ್ವಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ.
ಅಲ್ಲದೇ, ಆಪಲ್ ಸೈಡರ್ ವಿನೆಗರ್ ಅನ್ನು ನೀರಿನೊಂದಿಗೆ ಬೆರೆಸಿ ಕುಡಿಯುವುದರಿಂದ ಕರುಳು ಶುದ್ಧವಾಗುತ್ತದೆ, ಇದು ದೇಹದಲ್ಲಿ ವಿಷಕಾರಿ ವಸ್ತುಗಳು ಸಂಗ್ರಹವಾಗುವುದನ್ನು ತಡೆಯುತ್ತದೆ ಮತ್ತು ಹೊಟ್ಟೆ ಹಗುರವಾಗಿಸುತ್ತದೆ. ಉತ್ತಮ ಜೀರ್ಣಕ್ರಿಯೆಯು ಚಯಾಪಚಯ ಕ್ರಿಯೆಯ ಮೇಲೆ ನೇರ ಪರಿಣಾಮ ಬೀರುತ್ತದೆ, ಇದು ತೂಕ ಇಳಿಸುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ.
ಆಪಲ್ ಸೈಡರ್ ವಿನೆಗರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ನೀವು ಹೆಚ್ಚಿನ ಕಾರ್ಬೋಹೈಡ್ರೇಟ್ ಆಹಾರವನ್ನು ಸೇವಿಸಿದಾಗ, ನಿಮ್ಮ ದೇಹದ ಸಕ್ಕರೆ ಮಟ್ಟವು ವೇಗವಾಗಿ ಏರಿಕೆ ಆಗಬಹುದು.
ಆದರೆ ಆಪಲ್ ಸೈಡರ್ ವಿನೆಗರ್ ಆ ಸ್ಪೈಕ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ವಿಶೇಷವಾಗಿ ಇದು ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ, ಆದರೆ ವೈದ್ಯರ ಸಲಹೆಯ ಮೇರೆಗೆ ಮಾತ್ರ ಇದನ್ನು ತೆಗೆದುಕೊಳ್ಳುವುದು ಉತ್ತಮ.