ಭಾರತದ ಸಂವಿಧಾನ ಶಿಲ್ಪಿ ಡಾ. ಭೀಮರಾವ್ ರಾಮ್ ಅಂಬೇಡ್ಕರ್ ಜಯಂತಿಯನ್ನು ಪ್ರತಿ ವರ್ಷ ಏಪ್ರಿಲ್ 14ರಂದು ಭಾರತದಾದ್ಯಂತ ಆಚರಿಸಲಾಗುತ್ತದೆ. ಅಂಬೇಡ್ಕರ್ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಭಾರತೀಯ ನಾಯಕರಲ್ಲೊಬ್ಬರು. ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಭಾರತದ ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ.
ಶಿಕ್ಷಣದಿಂದ ಮಾತ್ರ ಸಾಧ್ಯ ಎನ್ನುವುದನ್ನು ಜಗತ್ತಿಗೆ ತೋರಿಸಿಕೊಟ್ಟ ಧೀಮಂತ ವ್ಯಕ್ತಿ. ಸಮಾನತೆಯ ಮಂತ್ರವನ್ನು ಸಾರಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಾಮಾಜಿಕ ಸುಧಾರಕ, ಶಿಕ್ಷಣ ತಜ್ಞ, ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಕಾನೂನು ತಜ್ಞರಾಗಿ ಚಿರಪರಿಚಿತರಾದವರು. ಭಾರತೀಯ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ದೇಶಕ್ಕೆ ನೀಡಿದ ಕೊಡುಗೆಗಳು ಅಗಾಧವಾದದ್ದು.
ಹುಡುಗಿಯರೇ ನೀವು ಕೂಡ ಮೆಡಿಮಿಕ್ಸ್ ಸೋಪ್ ಬಳಸ್ತಿದ್ದೀರಾ? ಇದು ಖಂಡಿತ ನಿಮಗಲ್ಲ!
ಅಂಬೇಡ್ಕರ್ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಅಂಬವಾಡೆಯಲ್ಲಿ ರಾಮ್ಜಿ ಸಕ್ಪಾಲ್ ಹಾಗೂ ಭೀಮಬಾಯಿ ದಂಪತಿಗಳ 14ನೇ ಮಗನಾಗಿ 1891ರ ಏಪ್ರಿಲ್ 14ರಂದು ಜನಿಸಿದರು. ಅನ್ಯಾಯ, ಶೋಷಣೆ, ಅಸ್ಪೃಶ್ಯತೆ ಮೊದಲಾದ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿದರು. ಓದುವುದರಲ್ಲಿ ಅಪಾರ ಆಸಕ್ತಿ, ಚುರುಕು ತನದಿಂದ ಅಧ್ಯಾಪಕರ ಮೆಚ್ಚುಗೆಗೆ ಪಾತ್ರರಾಗಿದ್ದ ಅಂಬೇಡ್ಕರ್ ರವರ ಬುದ್ಧಿವಂತಿಕೆ ಮೆಚ್ಚಿಕೊಂಡು ಪ್ರೀತಿ, ವಾತ್ಸಲ್ಯದಿಂದ ನೋಡುತ್ತಿದ್ದ ಬ್ರಾಹ್ಮಣ ಅಧ್ಯಾಪಕರೊಬ್ಬರು ಅಂಬೇಡ್ಕರ್ ಎಂಬ ಮನೆತನದವರು.
1953, ಜನವರಿ 12ರಂದು ಉಸ್ಮಾನಿಯಾ ವಿಶ್ವವಿದ್ಯಾನಿಲಯವು ಅವರಿಗೆ ಎಲ್ಎಲ್.ಡಿ ಗೌರವ ಪದವಿ ಕೊಟ್ಟು ಪುರಸ್ಕರಿಸಿತು. ಭಾರತದಲ್ಲಿ ಜಾತಿ ಪದ್ಧತಿ: ತಂತ್ರ, ಹುಟ್ಟು ಮತ್ತು ಬೆಳವಣಿಗೆ ಎಂಬ ಪ್ರಬಂಧ ಅವರ ಮೊಟ್ಟಮೊದಲ ಪ್ರಕಾಶಿತ ಕೃತಿ. ಭಾರತ ಸರ್ಕಾರ ಅವರಿಗೆ 1989ರಲ್ಲಿ ಭಾರತ ರತ್ನ ನೀಡಿ ಗೌರವಿಸಿತು.
ತಮ್ಮ ಕಾರ್ಯ ಸಾಧನೆಯ ಹೋರಾಟದಲ್ಲಿ ಅವರು ತಮ್ಮ ಇಡೀ ಬದುಕನ್ನು ದೀನ ದಲಿತರ ಹಿತ ರಕ್ಷ ಣೆಗಾಗಿ ದುಡಿದರು. 1956 ಡಿಸೆಂಬರ್ 6 ರಂದು ಅವರು ಕೊನೆಯುಸಿರೆಳೆದರು. ಅಂಬೇಡ್ಕರ್ ಕೇವಲ ದಲಿತರಿಗೆ ಮಾತ್ರವಲ್ಲದೆ, ಅವರಲ್ಲಿನ ಸಾಮಾಜಿಕ ಕಳಕಳಿ, ಉದಾತ್ತ ನಿಲುವಿನಿಂದ ಭಾರತೀಯರೆಲ್ಲರ ಮನದಲ್ಲಿ ನೆಲೆಯಾಗಿದ್ದಾರೆ.
ಅಂಬೇಡ್ಕರ್ ಜಯಂತಿಯ ಇತಿಹಾಸ
ಡಾ. ಬಿ ಆರ್ ಅಂಬೇಡ್ಕರ್ ಅವರು ಏಪ್ರಿಲ್ 14, 1891 ರಂದು ಜನಿಸಿದರು. ಸಮಾಜಕ್ಕೆ ನೀಡಿದ ಕೊಡುಗೆಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿ, ಭೀಮ ಜಯಂತಿ ಅಥವಾ ಸಮಾನತೆ ದಿನ ಎಂದು ಆಚರಿಸಿಕೊಂಡು ಬರಲಾಗುತ್ತಿದೆ. 2015 ರಿಂದ ಈ ದಿನವನ್ನು ಭಾರತದಾದ್ಯಂತ ಸಾರ್ವಜನಿಕ ರಜಾದಿನವಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ಅಂಬೇಡ್ಕರ್ ಜಯಂತಿಯ ಮಹತ್ವ
ಸ್ವಾತಂತ್ರ ಬಂದು ಅದೆಷ್ಟೋ ವರ್ಷಗಳು ಉರುಳಿದರೂ ಇಂದಿಗೂ ಕೂಡ ಜಾತಿ ಆಧಾರಿತ ತಾರತಮ್ಯಗಳು ಅಂತ್ಯಗೊಂಡಿಲ್ಲ. ಆದರೆ ಅಂದು ಇದ್ದ ಜಾತಿ ತಾರತಮ್ಯವು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ ಎನ್ನಬಹುದು. ಇದಕ್ಕೆ ಮೂಲ ಕಾರಣರೇ ಡಾ. ಬಿ ಆರ್ ಅಂಬೇಡ್ಕರ್. ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಹಕ್ಕುಗಳನ್ನು ಒದಗಿಸುವ ಸಂವಿಧಾನವನ್ನು ಅವರು
ರಚಿಸಿಕೊಟ್ಟ ಧೀಮಂತ ವ್ಯಕ್ತಿಯನ್ನು ನೆನಪಿಸಿಕೊಳ್ಳಲೇ ಬೇಕು. ಹೀಗಾಗಿ ದೇಶದ ಜನರಿಗೆ ಇವರು ನೀಡಿದ ಕೊಡುಗೆಗಳನ್ನು ಸ್ಮರಿಸುವ ಕೆಲಸವನ್ನು ಜನ್ಮ ದಿನದಂದು ಮಾಡಲಾಗುತ್ತದೆ. ದೇಶದ ಹಲವೆಡೆ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವುದಲ್ಲದೇ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತವೆ.