ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿಯ ಪ್ರಮುಖ ಆರೋಪಿಗಳಿಗಾಗಿ ಭಾರತೀಯ ಸೇನೆಯು ಹಗಲು-ರಾತ್ರಿ ಹುಡುಕಾಟ ನಡೆಸುತ್ತಿದೆ. ಇದರ ಬೆನ್ನಲ್ಲೇ ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಲಷ್ಕರ್-ಎ-ತೈಬಾ ಟಾಪ್ ಕಮಾಂಡರ್ನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
ಅಲ್ತಾಫ್ ಲಲ್ಲಿ ಟಾಪ್ ಕಮಾಂಡರ್ ಆಗಿದ್ದು ಉಗ್ರ ಕೃತ್ಯಗಳಿಗೆ ಸಹಕಾರ ನೀಡುತ್ತಿದ್ದ. ಅರಣ್ಯದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶುಕ್ರವಾರ ಬೆಳಗ್ಗೆ ಜಂಟಿ ಕಾರ್ಯಾಚರಣೆ ನಡೆಯಿತು. ಈ ಎನ್ಕೌಂಟರ್ನಲ್ಲಿ ಅಲ್ತಾಫ್ ಲಲ್ಲಿ ಹತ್ಯೆಯಾಗಿದ್ದಾನೆ.
Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!
ಈ ಕಾರ್ಯಾಚರಣೆ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶ್ರೀನಗರಕ್ಕೆ ಇಂದು ಆಗಮಿಸಿದ್ದು ಅವರಿಗೆ ಕಾರ್ಯಾಚರಣೆಯ ವಿವರ ನೀಡಲಾಯಿತು.