ಬೆಳಗಾವಿ : ಅನಧಿಕೃತ ಮಳಿಗೆಗಳ ತೆರವಿಗೆ ವರ್ತಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುಪ್ರಸಿದ್ಧ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿರುವ ಮಳಿಗೆಗಳನ್ನ ಶ್ರೀರೇಣುಕಾ ಯಲ್ಲಮ್ಮದೇವಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಅಶೋಕ ದುಡಗುಂಟಿ ನೇತೃತ್ವದಲ್ಲಿ ಪೊಲೀಸ್ ಭದ್ರತೆಯಲ್ಲಿ ತೆರವು ಕಾರ್ಯಾಚರಣೆಗೆ ಮುಂದಾಗಿತ್ತು.
ಆದರೆ ತೆರವು ಕಾರ್ಯಾಚರಣೆ ವಿರೋಧಿಸಿ ನೂರಾರು ಜನರು ದೇವಸ್ಥಾನದ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಅಂಗಡಿಗಳನ್ನು ತೆರವು ಮಾಡದಂತೆ ಪ್ರತಿಭಟನೆ ನಡೆಸಿ ಆಗ್ರಹಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಯಿತು.
ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನದ ಅಭಿವೃದ್ಧಿಗೆ ರಾಜ್ಯ, ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ನೀಡಲಾಗಿದ್ದು, ಕೆಲ ತಿಂಗಳು ಹಿಂದೆಯಷ್ಟೇ ಸಿಎಂ ಸಿದ್ದರಾಮಯ್ಯ ಸವದತ್ತಿ ದೇವಸ್ಥಾನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ ಮಾಡಿದರು. ಕಾಮಗಾರಿ ಹಿನ್ನೆಲೆ ಮಳಿಗೆಗಳ ತೆರವಿಗೆ ಮುಂದಾಗಿತ್ತು.