ದಾವಣಗೆರೆ : ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದ್ದು, ತಾಯಿ, ಮಗ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ನಗರದ ಕಾಯಿಪೇಟೆಯಲ್ಲಿ ನಡೆದಿದೆ.
ಕಾಯಿಪೇಟೆ ಬಿಜೆಪಿ ಮುಖಂಡ ರುದ್ರಮುನಿ ಸ್ವಾನಿ ಎಂಬುವರ ಮನೆಯಲ್ಲಿ ಮಧ್ಯರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಅವಘಡದಲ್ಲಿ 75 ವರ್ಷದ ವಿಮಲಾ, 35 ವರ್ಷದ ಕುಮಾರ್ ಸಾವನ್ನಪ್ಪಿಸಿದ್ದಾರೆ.
ಮನೆಯಲ್ಲಿ ಏಕಾಏಕಿ ದಟ್ಟವಾಗಿ ಹೊಗೆ ಆವರಿಸಿಕೊಂಡಿದೆ. ಕೂಡಲೇ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ. ಬೆಡ್ ರೂಮಿನಲ್ಲಿ ತಾಯಿ ಮತ್ತು ಮಗ ಇಬ್ಬರು ಮಲಗಿದ್ದು, ಡೋರ್ ಲಾಕ್ ಆಗಿದ್ದ ಕಾರಣ ಹೊರಗೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.