ದಾವಣಗೆರೆ:- ವಾಹನ ತಪಾಸಣೆ ವೇಳೆ ದುರಂತ ಸಂಭವಿಸಿದ್ದು, ಲಾರಿ ಹರಿದು ಪೊಲೀಸ್ ಕಾನ್ಸ್ಟೇಬಲ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಹೆಬ್ಬಾಳು ಟೋಲ್ ಗೇಟ್ ಬಳಿ ಜರುಗಿದೆ.
ಧಾರಾಕಾರ ಮಳೆ: ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ, ಮನೆಗಳಿಗೆ ನುಗ್ಗಿದ ನೀರು!
27 ವರ್ಷದ ರಾಮಪ್ಪ ಪೂಜಾರ್ ಮೃತ ಕಾನ್ಸ್ಟೇಬಲ್. ಹೆಬ್ಬಾಳು ಟೋಲ್ ಗೇಟ್ ಬಳಿ ಲಾರಿಯನ್ನು ತಪಾಸಣೆ ಮಾಡಲು ಹೋದ ರಾಮಪ್ಪ ಪೂಜಾರ್ ಮೇಲೆ ಚಾಲಕ ಲಾರಿ ಹರಿಸಿ ಎಸ್ಕೇಪ್ ಆಗಿದ್ದಾನೆ.
ಗಂಭೀರ ಗಾಯಗೊಂಡಿದ್ದ ಕಾನ್ಸ್ಟೇಬಲ್ ರಾಮಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಳಿಕ ರಾಮಪ್ಪ ಅವರ ಮೃತದೇಹವನ್ನು ಎಸ್ಎಸ್ ಆಸ್ಪತ್ರೆಯ ಶವಗಾರಕ್ಕೆ ರವಾನಿಲಾಯಿತು.
ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.