ಚಿಕ್ಕಮಗಳೂರು:- ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೋರ್ವ ಮೆಡಿಕಲ್ ಶಾಪ್ ನಲ್ಲಿ ಮಾತ್ರೆ ಖದೀಸುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಜರುಗಿದೆ.
ಕರಿಬೇವು ಒಗ್ಗರಣೆಗೆ ಮಾತ್ರವಲ್ಲ ಹಲವಾರು ರೀತಿಯ ಆರೋಗ್ಯ ಪ್ರಯೋಜನ ನೀಡುತ್ತೆ!
ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ನಿವಾಸಿ 60 ವರ್ಷದ ವಿಶ್ವನಾಥ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ವಿಶ್ವನಾಥ್, ಚಿಕ್ಕಮಗಳೂರು ನಗರದ ದೀಪ ನರ್ಸಿಂಗ್ ಹೋಂ ಬಳಿ ಮಾತ್ರೆ ಖರೀದಿಸುವಾಗಲೇ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಇನ್ನು ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಮೂಲಕ ಚಿಕ್ಕಮಗಳೂರಿನಲ್ಲಿ 2 ತಿಂಗಳಲ್ಲಿ 13 ಜನ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಜನ ಆತಂಕಗೊಂಡಿದ್ದಾರೆ.